ಸೋಮವಾರಪೇಟೆ, ನ. ೧೯: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನೂತನವಾಗಿ ತೆರೆಯಲಾಗಿರುವ ಕಾಮನ್ ಸರ್ವಿಸ್ ಸೆಂಟರ್‌ಗೆ ಚಾಲನೆ ನೀಡಲಾಯಿತು.

ಯೋಜನಾ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಾಜ್ಯದಲ್ಲಿ ಸರ್ಕಾರದೊಡನೆ ಸೇರಿ ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಶ್ಲಾಘನೀಯ. ಜನರಲ್ಲಿ ಜಾಗೃತಿ ಮೂಡಿಸುವುದರೊಂದಿಗೆ ದುಶ್ಚಟಗಳನ್ನು ಬಿಡಿಸುವ ಕೆಲಸವನ್ನೂ ಮಾಡುತ್ತಿದೆ. ಜನಸಾಮಾನ್ಯರಿಗೆ ಅನುಕೂಲವಾಗುವಂತೆ ಸಾಮಾನ್ಯ ಸೇವಾ ಕೇಂದ್ರವನ್ನು ಆರಂಭಿಸುವ ಮೂಲಕ ಜನತೆಗೆ ಸುಲಭ ಸೇವೆ ಒದಗಿಸಿದ್ದಾರೆ ಎಂದರು.

ಈ ಸಂದರ್ಭ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕ ಡಾ. ಯೋಗೇಶ್, ಪ.ಪಂ. ನಾಮನಿರ್ದೇಶನ ಸದಸ್ಯ ಎಸ್. ಮಹೇಶ್, ತಾಲೂಕು ಯೋಜನಾಧಿಕಾರಿ ರೋಹಿತ್ ಉಪಸ್ಥಿತರಿದ್ದರು.