ಆರ್ಥಿಕ ಅಪರಾಧಿಗಳು ದೇಶಕ್ಕೆ ಮರಳುವುದು ಬಿಟ್ಟರೆ ಬೇರೆ ಆಯ್ಕೆಗಳಿಲ್ಲ
ನವದೆಹಲಿ, ನ. ೧೮: ಹೈ ಪ್ರೊಫೈಲ್ ದೇಶಭ್ರಷ್ಟ ಆರ್ಥಿಕ ಅಪರಾಧಿಗಳನ್ನು ದೇಶಕ್ಕೆ ಕರೆತರಲು ರಾಜತಾಂತ್ರಿಕ ಸೇರಿದಂತೆ ಎಲ್ಲಾ ರೀತಿಯ ಮಾರ್ಗಗಳನ್ನು ಬಳಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ದೇಶಕ್ಕೆ ಮರಳುವುದು ಬಿಟ್ಟರೇ ಬೇರೆ ಆಯ್ಕೆಗಳಿಲ್ಲ ಎಂದಿದ್ದಾರೆ. ತಡೆ ರಹಿತ ಸಾಲದ ಹರಿವು ಹಾಗೂ ಆರ್ಥಿಕ ಬೆಳವಣಿಗೆ ಕುರಿತ ಸಮ್ಮೇಳನವೊಂದರಲ್ಲಿ ಮಾತನಾಡಿದ ಪ್ರಧಾನಿ, ಸಂಪತ್ತು ಮತ್ತು ಉದ್ಯೋಗ ಸೃಷ್ಟಿದಾರರಿಗೆ ಪೂರ್ವಭಾವಿ ಸಾಲ ನೀಡುವುದರೊಂದಿಗೆ ಬ್ಯಾಂಕ್ಗಳು ಬೆಂಬಲವಾಗಿ ನಿಲ್ಲಬೇಕು ಎಂದು ಹೇಳಿದ ಅವರು, ಸರಿಯಾದ ರೀತಿಯಲ್ಲಿ ಸಾಲ ನೀಡುವ ಬ್ಯಾಂಕ್ಗಳೊAದಿಗೆ ನಿಲ್ಲುವುದಾಗಿ ತಿಳಿಸಿದರು. ಆರ್ಥಿಕ ಅಪರಾಧಿಗಳನ್ನು ದೇಶಕ್ಕೆ ವಾಪಸ್ ಕರೆತರಲು ಎಲ್ಲಾ ರೀತಿಯಲ್ಲಿ ಪ್ರಯತ್ನ ಮಾಡಲಾಗುತ್ತಿದೆ. ನಾವುಗಳು ಕಾನೂನುಗಳು ಮತ್ತು ನೀತಿಗಳ ಮೇಲೆ ಅವಲಂಬಿತರಾಗಿದ್ದು, ರಾಜತಾಂತ್ರಿಕ ಮಾರ್ಗವನ್ನು ಕೂಡಾ ಬಳಸಿಕೊಂಡಿದ್ದೇವೆ. ಆರ್ಥಿಕ ಅಪರಾಧಿಗಳು ರಾಷ್ಟçಕ್ಕೆ ಮರಳಬೇಕೆಂಬ ಸ್ಪಷ್ಟ ಸಂದೇಶವಿದೆ. ಈ ಪ್ರಯತ್ನವನ್ನು ಮುಂದುವರೆಸುತ್ತೇವೆ ಎಂದು ಹೇಳಿದರು. ಆದಾಗ್ಯೂ, ಆರ್ಥಿಕ ಅಪರಾಧಿಗಳ ಹೆಸರಿನ ಉಲ್ಲೇಖವನ್ನು ಪ್ರಧಾನಿ ಮಾಡಲಿಲ್ಲ. ಹಣ ವರ್ಗಾವಣೆ ಪ್ರಕರಣ ಮತ್ತು ಬ್ಯಾಂಕ್ಗಳಿಗೆ ವಂಚನೆ ಪ್ರಕರಣದಲ್ಲಿ ವಿಜಯ್ ಮಲ್ಯ ಮತ್ತು ನೀರವ್ ಮೋದಿ ಅವರಂತಹ ದೇಶಭ್ರಷ್ಟ ಆರ್ಥಿಕ ಅಪರಾಧಿಗಳನ್ನು ದೇಶಕ್ಕೆ ಕರೆತರಲು ಭಾರತ ಇತ್ತೀಚಿಗೆ ಅನೇಕ ರೀತಿಯಲ್ಲಿ ಪ್ರಯತ್ನ ನಡೆಸುತ್ತಲೇ ಬಂದಿದೆ. ಮೂರು ಸಿಎಸ್ಗಳಾದ ಸಿಬಿಐ, ಸಿವಿಸಿ ಮತ್ತು ಸಿಎಜಿ ಬ್ಯಾಂಕರ್ಗಳಲ್ಲಿನ ಭಯವನ್ನು ನಿವಾರಿಸಿರುವ ಪ್ರಧಾನಿ ನರೇಂದ್ರ ಮೋದಿ, ರಾಷ್ಟಿçÃಯ ಹಿತಾಸಕ್ತಿ ಮತ್ತು ಸಂಪೂರ್ಣ ಪ್ರಾಮಾಣಿಕತೆಯಿಂದ ತೆಗೆದುಕೊಳ್ಳುವ ನಿರ್ಧಾರಗಳಿಗೆ ಅವರೊಂದಿಗೆ ನಿಲ್ಲುವುದಾಗಿ ಗುರುವಾರ ಹೇಳಿದ್ದಾರೆ.
ಉಪಹಾರದಲ್ಲಿ ಹಾವಿನ ಮರಿ-೫೨ ವಿದ್ಯಾರ್ಥಿಗಳು ಅಸ್ವಸ್ಥ
ಯಾದಗಿರಿ, ನ. ೧೮: ಅಬ್ಬೆ ತುಮಕೂರು ವಿಶ್ವಾರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯ ಉಪಹಾರದಲ್ಲಿ ಹಾವಿನ ಮರಿ ಪತ್ತೆಯಾಗಿರುವ ಘಟನೆ ನಡೆದಿದ್ದು, ಉಪ್ಪಿಟ್ಟು ಸೇವಿಸಿದ ೫೨ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇಂದು ಬೆಳಿಗ್ಗೆ ಉಪಹಾರ ಸೇವಿಸಿದ ನಂತರ ಮೂವರು ವಿದ್ಯಾರ್ಥಿಗಳು ವಾಂತಿ ಮಾಡಲು ಪ್ರಾರಂಭಿಸಿದರು ಮತ್ತು ೪೯ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳಿಗೆ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡಿತು ಮತ್ತು ವಾಂತಿ ಮಾಡಲು ಆರಂಭಿಸಿದರು. ಅಸ್ವಸ್ಥಗೊಂಡ ಮಕ್ಕಳಿಗೆ ಮುದ್ನಾಳ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಮೂವರು ವಿದ್ಯಾರ್ಥಿಗಳು ತೀವ್ರ ನಿಗಾಘಟಕದಲ್ಲಿ ಮತ್ತು ಉಳಿದ ೪೯ ವಿದ್ಯಾರ್ಥಿಗಳು ಸಾಮಾನ್ಯ ವಾರ್ಡ್ಗೆ ದಾಖಲಾಗಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ಜಿಲ್ಲಾ ಆಸ್ಪತ್ರೆಯ ಮೂಲಗಳು ತಿಳಿಸಿವೆ. ತಾಲೂಕು ಆರೋಗ್ಯಾಧಿಕಾರಿ ಹನುಮಂತರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.
ಮಹಿಳಾ ಉದ್ಯಮಿಗಳಿಗೆ ಪ್ರತ್ಯೇಕ ಆರ್ಥಿಕ ಸಂಸ್ಥೆ ರಚನೆಗೆ ಚಿಂತನೆ
ಬೆAಗಳೂರು, ನ. ೧೮: ಗ್ರಾಮಗಳ ಸ್ತಿçÃಶಕ್ತಿ ಸಂಘಗಳಿAದ ಹಿಡಿದು ಬೃಹತ್ ಮಟ್ಟದ ಉದ್ಯಮಗಳಿಗಾಗಿಯೇ ಉತ್ತಮ ಆರ್ಥಿಕ ವ್ಯವಸ್ಥೆ ಕಲ್ಪಿಸಲು ಪ್ರತ್ಯೇಕ ಆರ್ಥಿಕ ಸಂಸ್ಥೆಯನ್ನು ರಚಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ. ಇಂದು ಉಬುಂಟು - ಮಹಿಳಾ ಉದ್ಯಮಿಗಳ ಸಂಘದ ವತಿಯಿಂದ ಆಯೋಜಿಸಿದ್ದ ಅಂರ್ರಾಷ್ಟಿçÃಯ ಮಹಿಳಾ ಉದ್ಯಮಿಗಳ ದಿನಾಚರಣೆ- ಒಗ್ಗಟ್ಟಾಗಿ ಬೆಳೆಯೋಣ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಮಾತನಾಡಿದರು. ಮಹಿಳೆಯರು ಉದ್ಯಮದಲ್ಲಿ ತೊಡಗಿಕೊಳ್ಳಬೇಕು. ಆದರಿಂದ ಪ್ರತ್ಯೇಕ ಸಂಸ್ಥೆ ಸ್ಥಾಪಿಸುವ ಚಿಂತನೆ ಇದೆ ಎಂದು ಅವರು ಹೇಳಿದರು. ಉದ್ಯಮಶೀಲತೆ ಎಂದರೆ ಮಹಿಳೆ ಎಂದಾಗಬೇಕು. ಮಹಿಳಾ ಉದ್ಯಮಿ ಎನ್ನುವುದರಿಂದ ಹೊರಗೆ ಬರಬೇಕು. ಮನೆ ನೋಡಿಕೊಳ್ಳುವುದು ವಿಶ್ವದಲ್ಲಿಯೇ ಅತಿ ದೊಡ್ಡ ಉದ್ಯಮ. ಅದರಲ್ಲಿಯೇ ವಿವಿಧ ಶಾಖೆಗಳಿವೆ. ಮನೆಯಲ್ಲಿ ಕೆಲಸ ಮಾಡುವ ಹೆಣ್ಣು ಮಕ್ಕಳು ಕೂಡ ಉದ್ಯಮಿಗಳೇ. ಭಾರತೀಯ ಮಹಿಳೆಯರು ಬಹುರಾಷ್ಟಿçÃಯ ಬ್ಯಾಂಕ್ಗಳಿಗಿAತಲೂ ಹೆಚ್ಚಿನ ಉಳಿತಾಯವನ್ನು ಮಾಡಿದ್ದಾರೆ ಎಂಬ ವರದಿ ಇದೆ. ಮನೆಗಳಲ್ಲಿ ದಿವಾಳಿತನ ಎಂದೂ ಘೋಷಣೆಯಾದ ಉದಾಹರಣೆಯಿಲ್ಲ. ಉಳಿತಾಯ ನಮ್ಮ ಸಂಸ್ಕೃತಿಯ ಭಾಗ ಎಂದರು. ಅಂಧ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮವನ್ನು ಒಂದು ವಾರದೊಳಗೆ ರೂಪಿಸಿ, ಅಂಧ ಮಹಿಳೆಯರು ಉದ್ಯೋಗ ಹೊಂದುವAತೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ನಿರಂತರ ಮಳೆ
ಬೆಂಗಳೂರು, ನ. ೧೮: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಇದು ಇನ್ನೂ ಎರಡರಿಂದ ಮೂರು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ಗುರುವಾರ ಹೇಳಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ಆಗಿರುವ ವಾಯುಭಾರ ಕುಸಿತವೇ ನಿರಂತರ ಮಳೆಗೆ ಕಾರಣವಾಗಿದೆ. ಇದು ಚೆನ್ನೆöÊ ಸಮೀಪ ಕೇಂದ್ರೀಕೃತಗೊAಡಿದೆ. ಇದರಿಂದಾಗಿಯೇ ಚೆನ್ನೆöÊ ಸೇರಿದಂತೆ ಅಲ್ಲಿನ ಸುತ್ತಮುತ್ತಲ ಜಿಲ್ಲೆಗಳಲ್ಲಿ ಅತಿಯಾದ ಮಳೆಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. ಪ್ರತಿವರ್ಷ ನವೆಂಬರ್ - ಡಿಸೆಂಬರ್ ತಿಂಗಳುಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಮಾನ್ಯ. ಸಮುದ್ರದ ಮೇಲ್ಮೆಯಲ್ಲಿ ಇದರ ಪರಿಣಾಮ ಹೆಚ್ಚಾಗಿರುತ್ತದೆ. ಭೂಮಿ ಸಮೀಪಿಸಿದಂತೆ ಇದರ ಪರಿಣಾಮ ತಗ್ಗುತ್ತದೆ. ಆದರೆ ಸಮುದ್ರ ತೀರದ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿರುತ್ತದೆ. ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಇನ್ನೂ ಕೆಲವಾರು ಜಿಲ್ಲೆಗಳಲ್ಲಿಯೂ ಮಳೆಯ ಪರಿಣಾಮವಿರುತ್ತದೆ. ವಾಯುಭಾರ ಕುಸಿತ ಪರಿಣಾಮ ಪರಿಧಿ ೫೦೦ ಕಿಲೋ ಮೀಟರ್ ತನಕ ಪಸರಿಸಿರುತ್ತದೆ ಎಂದಿದ್ದಾರೆ. ನವೆಂಬರ್ - ಡಿಸೆಂಬರ್ ತಿಂಗಳಿನಲ್ಲಿ ಸಾಮಾನ್ಯವಾಗಿ ಬಂಗಾಳ ಕೊಲ್ಲಿಯಲ್ಲಿ ವಾರಕ್ಕೊಮ್ಮೆ, ಕೆಲವೊಮ್ಮೆ ಎರಡು ವಾರಕ್ಕೊಮ್ಮೆಯೂ ವಾಯುಭಾರ ಕುಸಿತ ಆಗುತ್ತದೆ. ಕೆಲವೊಮ್ಮೆ ಇದು ವೇಗವಾಗಿ ಚಲನೆಯಾಗುತ್ತದೆ. ಸದ್ಯಕ್ಕೆ ಇದು ನಿಧಾನವಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ನಾಳೆ ಮಧ್ಯಾಹ್ನದವರೆಗೂ ಮಳೆಯ ಬಿರುಸು ಹೆಚ್ಚಿರುತ್ತದೆ. ಇನ್ನೂ ಮೂರು ದಿನಗಳವರೆಗೆ ಮಳೆ ಇರುತ್ತದೆ ಎಂದು ಅವರು ವಿವರಿಸಿದರು.