ನಾಪೋಕ್ಲು, ನ. ೧೯: ಕಕ್ಕಬ್ಬೆ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಕಲಾಡ್ಚ ಹಬ್ಬವನ್ನು ಭಕ್ತರು ಸೇರಿ ಇಂದು ಸಾಂಪ್ರದಾಯಿಕವಾಗಿ ಆಚರಿಸಲಾಯಿತು.

ಇಗ್ಗುತ್ತಪ್ಪ ಸನ್ನಿಧಿಯಲ್ಲಿ ದೇವತಕ್ಕ, ತಕ್ಕಮುಖ್ಯಸ್ಥ ಕುಟುಂಬಸ್ಥರ ಹಾಲು ಬಲಿವಾಡು ಎತ್ತುಪೋರಾಟದೊಂದಿಗೆ ದೇವಾಲಯಕ್ಕೆ ತಲುಪಿ ಎತ್ತು ಪೋರಾಟವನ್ನು ಒಪ್ಪಿಸಲಾಯಿತು. ನಂತರ ಭಕ್ತಾದಿಗಳಿಂದ ತುಲಾಭಾರ ಸೇವೆ ಸೇರಿದಂತೆ ಹರಕೆ ಇನ್ನಿತರ ಪೂಜೆಗಳನ್ನು ನೆರವೇರಿಸಿದ ಬಳಿಕ ಮಹಾಪೂಜೆ ಜರುಗಿ ಭಕ್ತಾದಿಗಳಿಗೆ ತೀರ್ಥ ಪ್ರಸಾದ ಅನ್ನಸಂತರ್ಪಣೆ ನೆರವೇರಿತು. ನಂತರ ದೇವರ ಪ್ರಾರ್ಥನೆಯ ಬಳಿಕ ದೇವರ ನೃತ್ಯಬಲಿ ಜರುಗಿ ಎತ್ತುಪೋರಾಟದೊಂದಿಗೆ ತಕ್ಕ ಮುಖ್ಯಸ್ಥರು

(ಮೊದಲ ಪುಟದಿಂದ) ಭಕ್ತಾದಿಗಳು ಮಲ್ಮ ಬೆಟ್ಟಕ್ಕೆ ಶ್ರದ್ದಾಭಕ್ತಿಯಿಂದ ತೆರಳಿದರು.

ಇದೇ ಸಂದರ್ಭ ನೆಲಜಿ ದೇವಾಲಯದಲ್ಲಿ ಹಬ್ಬವನ್ನು ಆಚರಿಸಿ ನೆಲಜಿ ಹಾಗೂ ಪೇರೂರು ಗ್ರಾಮದ ತಕ್ಕ ಮುಖ್ಯಸ್ಥರು ಎತ್ತುಪೋರಾಟದೊಂದಿಗೆ ಆಗಮಿಸಿದರು. ಅರ್ಚಕರು ಶುದ್ಧಕಲಶ ಪೂಜಾಕಾರ್ಯಗಳನ್ನು ನೆರವೇರಿಸಿದ ಬಳಿಕ ಎತ್ತುಪೋರಾಟ ದುಡಿಕೊಟ್ಟ್ ಪಾಟ್ ನೆರವೇರಿತು. ಬಳಿಕ ಎತ್ತುಪೋರಾಟದ ಅಕ್ಕಿಯನ್ನು ಮೂರು ಭಾಗಮಾಡಿ ನೆಲಜಿ, ಪೇರೂರು ಹಾಗೂ ಪಾಡಿ ದೇವಾಲಯದ ತಕ್ಕಮುಖ್ಯಸ್ಥರು ಹಂಚಿಕೊAಡು ದೇವರ ಕಟ್ಟು ಸಡಿಲಿಸಿ ನಾಡಿನ ಸುಭಿಕ್ಷಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಸಂಜೆ ದೇವಾಲಯದಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಸಂಪ್ರದಾಯದAತೆ ಕಲಾಡ್ಚ ಸಂಭ್ರಮದಿAದ ಜರುಗಿತು. ಈ ಸಂದರ್ಭ ನಾಡಿನ ತಕ್ಕಮುಖ್ಯಸ್ಥರು ಊರಿನ ಪರವೂರಿನ ಭಕ್ತರು ಪಾಲ್ಗೊಂಡಿದ್ದರು. - ದುಗ್ಗಳ