ಉಪಕಾರ್ಯದರ್ಶಿ ಭೇಟಿ
*ಸಿದ್ದಾಪುರ, ನ. ೧೯: ನೆಲ್ಲಿಹುದಿಕೇರಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದ ಹಿನ್ನೆಲೆ ಜಿ.ಪಂ. ಉಪಕಾರ್ಯದರ್ಶಿ ಲಕ್ಷಿö್ಮ ಪಂಚಾಯಿತಿಗೆ ಭೇಟಿ ನೀಡಿ ಕಡತಗಳು ಹಾಗೂ ಕಾಮಗಾರಿ ಪರಿಶೀಲನೆ ನಡೆಸಿದರು.
ಕುಂಬಾರಗುAಡಿ ಭಾಗದಲ್ಲಿ ಬಡವರಿಗೆ ಮನೆ ಕೊಡಿಸುವುದಾಗಿ ಭರವಸೆ ನೀಡಿ ನಿಯಮ ಬಾಹಿರವಾಗಿ ಪಿಡಿಒ ಹಣ ಸಂಗ್ರಹಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದರು. ಅಲ್ಲದೆ ಇಲ್ಲಿಯವರೆಗೆ ಮನೆಗಳನ್ನು ನಿರ್ಮಿಸಿಕೊಡದೆ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ನದಿ ದಡದ ಮೇಲೆ ಪಾರ್ಕ್ ನಿರ್ಮಿಸುತ್ತಿರುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಉಪಕಾರ್ಯದರ್ಶಿಗಳು ಕಾಮಗಾರಿ ಸ್ಥಗಿತಕ್ಕೆ ಸೂಚನೆ ನೀಡಿದರು. ವಿನಾಕಾರಣ ಸಾರ್ವಜನಿಕರ ಹಣ ಪೋಲು ಮಾಡದಂತೆ ಅಧಿಕಾರಿಗಳಿಗೆ ತಿಳಿಸಿದರು. ಉದ್ಯೋಗಖಾತ್ರಿ ಯೋಜನೆ ಸೇರಿದಂತೆ ಇತರ ಕಾಮಗಾರಿಗಳ ಹೆಸರಿನಲ್ಲಿ ಕಾಮಗಾರಿ ನಡೆಯದಿದ್ದರೂ ಬಿಲ್ ಪಾವತಿಯಾಗಿರುವ ಕುರಿತು ಮಾಹಿತಿ ಲಭಿಸಿತು. ಮೂರನೇ ವಾರ್ಡ್ನಲ್ಲಿ ಎರಡು ಕಡೆ ನಾಲೆ ನಿರ್ಮಿಸಲಾಗಿದೆ ಎಂದು ಹೇಳಿ ಅಪೂರ್ಣಗೊಂಡ ಕಾಮಗಾರಿಗೂ ಸಂಪೂರ್ಣ ಹಣ ಡ್ರಾ ಮಾಡಲಾಗಿದೆ ಎಂದು ಪರಿಶೀಲನೆಯ ವೇಳೆ ತಿಳಿದು ಬಂದಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಉಪಕಾರ್ಯದರ್ಶಿಗಳು ಪ್ರಕರಣ ತನಿಖೆ ಹಂತದಲ್ಲಿರುವುದರಿAದ ಹೆಚ್ಚಿನ ಮಾಹಿತಿಯನ್ನು ನೀಡಲು ಸಾಧ್ಯವಿಲ್ಲವೆಂದು ತಿಳಿಸಿದರು.