ಮಡಿಕೇರಿ, ನ. ೧೮ : ಪ್ರಸಕ್ತ(೨೦೨೧-೨೨) ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ಎ, ೩ಎ ಹಾಗೂ ೩ಬಿ ಮತ್ತು ಸಾಮಾನ್ಯ ವರ್ಗದ ಅರ್ಹ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕವಿನಾಯಿತಿ, ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್, ೩೦ ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ತೊಂದರೆ/ಅಡಚಣೆಗಳು ಉಂಟಾದಲ್ಲಿ ಮಡಿಕೇರಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮೊ.ಸಂ.೯೪೮೦೩೫೬೪೦೯, ಸೋಮವಾರಪೇಟೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮೊ.ಸಂ.೮೬೬೦೦೧೯೦೪೨, ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕುಶಾಲನಗರ ಮೊ.ಸಂ. ೮೬೬೦೦೧೯೦೪೨ ಹಾಗೂ ವೀರಾಜಪೇಟೆ ತಾಲೂಕು ಪೊನ್ನಂಪೇಟೆ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಮೊ.ಸಂ.೯೮೮೬೯೨೯೩೯೪ ಈ ಸ್ಥಳಗಳಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.