ಮಡಿಕೇರಿ, ನ.೧೯: ಅಕ್ಟೋಬರ್, ನವೆಂಬರ್ ತಿಂಗಳಲ್ಲಿ ಸುರಿದ ಅಕಾಲಿಕ ಮಳೆಯಿಂದ ಹಾನಿಯಾಗಿರುವ ಕಾಫಿ, ಕೃಷಿ, ಮೂಲಸೌಲಭ್ಯ ಮತ್ತಿತರ ಹಾನಿಗೆ ಸಂಬAಧಿಸಿದAತೆ ತಕ್ಷಣವೇ ಸಮೀಕ್ಷೆ ಮಾಡಿ ವರದಿ ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.

ಅಕಾಲಿಕ ಮಳೆಯಿಂದ ಉಂಟಾದ ನಷ್ಟದ ಬಗ್ಗೆ ವೀಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿ ಅವರಿಂದ ಮಾಹಿತಿ ಪಡೆದು ಮುಖ್ಯಮಂತ್ರಿ ಅವರು ಮಾತನಾಡಿದರು.

ಕಾಫಿ, ಕೃಷಿ, ತೋಟಗಾರಿಕೆ ಬೆಳೆ ಹಾನಿಗೆ ಸಂಬAಧಿಸಿದAತೆ ಪರಿಹಾರ ಪೋಟರ್ಲ್ನಲ್ಲಿ ನಮೂನೆ ಮಾಡುವಂತೆ, ಅಕಾಲಿಕ ಮಳೆಯಿಂದ ಉಂಟಾದ ಹಾನಿ ಸಂಬAಧ ಸಮೀಕ್ಷೆ ಮಾಡುವುದರ ಜೊತೆಗೆ, ಪರಿಹಾರ ವಿತರಿಸಲು ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

(ಮೊದಲ ಪುಟದಿಂದ) ವಸತಿ ಸಚಿವ ವಿ.ಸೋಮಣ್ಣ ಅವರು ಇನ್ಫೋಸಿಸ್ ಸಂಸ್ಥೆಯಿAದ ಜಂಬೂರಿನಲ್ಲಿ ನಿರ್ಮಾಣ ವಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿ ಹಾಗೂ ಮೂಲ ಸೌಲಭ್ಯ ಸಂಬAಧ ಮಾಹಿತಿ ಪಡೆದರು.

ಕಂದಾಯ ಸಚಿವರಾದ ಆರ್.ಅಶೋಕ್ ಅವರು ಅಕಾಲಿಕ ಮಳೆಯಿಂದ ಉಂಟಾದ ಹಾನಿಗೆ ಸಂಬAಧಿಸಿದAತೆ ಹಲವು ಮಾಹಿತಿ ಪಡೆದರು. ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಕಾಫಿ ಬೆಳೆ ಹಾನಿ ಸಂಬAಧಿಸಿದAತೆ ಜಂಟಿ ಸಮೀಕ್ಷೆ ಮಾಡಿ ವರದಿ ನೀಡಲಾಗುವುದು ಎಂದರು. ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಹೆಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನಾನಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.