ನವದೆಹಲಿ, ನ. ೧೯: ಕೇಂದ್ರ ಸರ್ಕಾರ ಕೊನೆಗೂ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿದ್ದ, ದೇಶದ ಹಲವು ರಾಜ್ಯಗಳ ರೈತರು ವಿರೋಧಿಸುತ್ತಿದ್ದ ಮೂರು ನೂತನ ಕೃಷಿ ಕಾಯ್ದೆಗಳನ್ನು (ಈಚಿಡಿmeಡಿs ಟಚಿತಿ) ವಾಪಸ್ ಪಡೆಯುವ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.
ಇಂದು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ೩ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಲಾಗುವುದು. ಈ ತಿಂಗಳ ಅಂತ್ಯದಲ್ಲಿ ಆರಂಭವಾಗುವ ಸಂಸತ್ತಿನ ಚಳಿಗಾಲ ಅಧಿವೇಶನ ದಲ್ಲಿಯೇ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಕಟಿಸಿದ್ದಾರೆ.
ಇಂದು ಗುರುನಾನಕ್ ಜಯಂತಿಯAದು ದೇಶವಾಸಿಗಳ ಮುಂದೆ ರೈತ ಮಸೂದೆಗಳನ್ನು ವಾಪಸ್ ಮಾಡುವ ನಿರ್ಧಾರ ಪ್ರಕಟಿಸುತ್ತಿದ್ದೇನೆ, ರೈತರು ಪ್ರತಿಭಟನೆ ಕೈಬಿಟ್ಟು ತಮ್ಮ ಮನೆಗಳಿಗೆ ತೆರಳುವಂತೆ ಪ್ರಧಾನಿಗಳು ಮನವಿ ಮಾಡಿ ಕೊಂಡರು. ಈ ಕೃಷಿ ಕಾನೂನುಗಳನ್ನು ಹಿಂಪಡೆಯಲು ನಾವು ಸಾಂವಿಧಾನಿಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಮೂರು ಕೃಷಿ ಕಾನೂನುಗಳ ಗುರಿ ರೈತರನ್ನು, ವಿಶೇಷವಾಗಿ ಸಣ್ಣ ರೈತರನ್ನು ಸಬಲೀಕರಣ ಗೊಳಿಸುವುದಾಗಿತ್ತು. ಮೂರು ಕಾನೂನುಗಳು ರೈತರ ಪ್ರಯೋಜನP Á್ಕಗಿವೆಯಾದರೂ ಒಂದು ವರ್ಗದ ರೈತರ ಮನವೊಲಿಸಲು ನಮಗೆ ಸಾಧ್ಯವಾಗಲಿಲ್ಲ
(ಮೊದಲ ಪುಟದಿಂದ) ಎಂದು ಈ ಕುರಿತು ಘೋಷಣೆ ಮಾಡುವ ಸಂದರ್ಭದಲ್ಲಿ ಪ್ರಧಾನಿ ಹೇಳಿದರು.
೨೦೧೪ರಿಂದ ನಮ್ಮ ಸರ್ಕಾರದಲ್ಲಿ ಕೃಷಿ ಬಜೆಟ್ ೫ ಪಟ್ಟು ಏರಿಕೆ ಯಾಗಿದ್ದು, ವಾರ್ಷಿಕ ೧.೨೫ ಲಕ್ಷ ಕೋಟಿ ರೂಪಾಯಿಗಳನ್ನು ಕೃಷಿಗೆ, ರೈತರ ಒಳಿತಿಗೆ ಖರ್ಚು ಮಾಡಿದ್ದೇವೆ. ನನ್ನ ಐದು ದಶಕಗಳ ಸಾರ್ವಜನಿಕ ಜೀವನದಲ್ಲಿ ನಾನು ರೈತರ ಕಷ್ಟಗಳು, ಸವಾಲುಗಳನ್ನು ಬಹಳ ಹತ್ತಿರದಿಂದ ಕಂಡಿದ್ದೇನೆ. ಕೇಂದ್ರ ಸರ್ಕಾರ ಒಂದು ವರ್ಷದ ಹಿಂದೆ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಮೂರು ಕೃಷಿ ತಿದ್ದುಪಡಿ ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಅಂಗೀಕಾರ ಪಡೆದಿತ್ತು. ರೈತರೊಂದಿಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೊಮರ್, ಗೃಹ ಸಚಿವ ಅಮಿತ್ ಶಾ ಮೊದಲಾ ದವರು ೧೧ ಸುತ್ತಿನ ಔಪಚಾರಿಕ ಮಾತುಕತೆ ನಡೆಸಿದ್ದರೂ ಪ್ರಯೋಜನ ವಾಗಿರಲಿಲ್ಲ. ಇದು ಕೇವಲ ನಮ್ಮ ದೇಶದಲ್ಲಿ ಮಾತ್ರವಲ್ಲದೆ ಅಂತಾರಾಷ್ಟಿçÃಯ ಮಟ್ಟದಲ್ಲಿ ಸುದ್ದಿಯಾಗಿ ಹಲವು ಸೆಲೆಬ್ರಿಟಿಗಳು ರೈತರ ಪರವಹಿಸಿ ಮಾತನಾಡಿದ್ದರು.
ಕಳೆದ ಜನವರಿ ೨೬ರಂದು ದೆಹಲಿಯಲ್ಲಿ ಗಣರಾಜ್ಯೋತ್ಸವ ಸಮಯದಲ್ಲಿ ತೀವ್ರ ಹಿಂಸಾಚಾರ, ಪ್ರತಿಭಟನೆ ಕೂಡ ನಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದಾಗಿದೆ.