ಮಡಿಕೇರಿ, ನ.೧೯: ಜಿಲ್ಲೆಯಲ್ಲಿ ಶುಕ್ರವಾರ ೧೧ ಹೊಸ ಕೋವಿಡ್-೧೯ ಪ್ರಕರಣಗಳು ದೃಢಪಟ್ಟಿದೆ. ೧೧ ಪ್ರಕರಣ ಆರ್ಟಿಪಿಸಿಆರ್ ಪರೀಕ್ಷೆಯ ಮೂಲಕ, ಮಡಿಕೇರಿ ತಾಲೂಕಿನಲ್ಲಿ ೨, ಸೋಮವಾರಪೇಟೆ ೯ ಹೊಸ ಕೋವಿಡ್-೧೯ ಪ್ರಕರಣಗಳು ಕಂಡುಬAದಿವೆೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-೧೯ ಪ್ರಕರಣಗಳ ಸಂಖ್ಯೆ ೩೫,೪೦೦ ಆಗಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ೦೩ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು ೩೪,೯೦೯ ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ ಒಟ್ಟು ೪೩೧ ಮರಣ ಪ್ರಕರಣಗಳು ವರದಿಯಾಗಿವೆ. ೬೦ ಸಕ್ರಿಯ ಪ್ರಕರಣಗಳಿದ್ದು, ಕಳೆದ ೨೪ ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಕಂಟೈನ್ಮೆAಟ್ ವಲಯಗಳ ಸಂಖ್ಯೆ ೧೨ ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.೦.೪೮ ಆಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.