ಕೂಡಿಗೆ, ನ. ೨೧: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭುವನಗಿರಿ ಗ್ರಾಮದ ಶ್ರೀ ಭಕ್ತ ಕನಕದಾಸರ ಸೇವಾ ಸಂಘದ ವತಿಯಿಂದ ಕನಕದಾಸರ ೫೩೪ನೇ ಜಯಂತಿಯ ಸಮಾರಂಭ ತಾ. ೨೨ ರಂದು (ಇಂದು) ಭುವನಗಿರಿ ಗ್ರಾಮದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಕೃಷÀ್ಣ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್, ಬೆಂಗಳೂರು ಪ್ರದೇಶ ಕುರುಬ ಸಂಘದ ನಿರ್ದೇಶಕ ಕೆ.ಬಿ. ಶಾಂತಪ್ಪ, ಹೇಮಲತಾ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಹೆಚ್.ಎಸ್. ಮಹೇಶ್, ಜಿಲ್ಲಾ ಸಂಗೊಳ್ಳಿ ರಾಯಣ್ಣ ಕುರುಬರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಡಿ.ಆರ್. ಪ್ರಭಾಕರ್ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲ್ಲಿದ್ದಾರೆ ಎಂದು ತಿಳಿಸಿದ್ದಾರೆ.