ಮಡಿಕೇರಿ, ನ. ೨೧: ಹಿಂದೂ ಧಾರ್ಮಿಕ ಸಂಸ್ಥೆ ಧರ್ಮದಾಯ ದತ್ತಿಗಳ ಇಲಾಖೆ, ಓಂಕಾರೇಶ್ವರ ದೇವಾಲಯ, ಮಡಿಕೇರಿ ಕೊಡವ ಸಮಾಜ, ಪಾಂಡೀರ ಕುಟುಂಬದ ಆಶ್ರಯದಲ್ಲಿ ಹುತ್ತರಿ ಕೋಲಾಟ್ ಕಾರ್ಯಕ್ರಮ ನಡೆಯಿತು.

ಕೋಟೆ ಆವರಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ನೃತ್ಯಗಳಾದ ಕೋಲಾಟ್, ಉಮ್ಮತಾಟ್, ಬೊಳಕಾಟ್ ಅನ್ನು ಪಾಂಡೀರ ಕುಟುಂಬದ ಸದಸ್ಯರು ಪ್ರದರ್ಶಿಸಿದರು. ಜೊತೆಗೆ ಮಡಿಕೇರಿ ಕೊಡವ ಸಮಾಜ ಹಾಗೂ ಪೊಮ್ಮಕ್ಕಡ ಕೂಟದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.

ಕಾರ್ಯಕ್ರಮಕ್ಕೆ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಚಾಲನೆ ನೀಡಿದರು. ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಮೇಶ್ ಹೊಳ್ಳ, ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷೆ ರಾಣಿ ಮಾಚಯ್ಯ, ಪಾಂಡೀರ ಕುಟಂಬದ ಪಟ್ಟೆದಾರ ಮೇದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.