ಮಡಿಕೇರಿ, ನ. ೨೧: ಜಿಲ್ಲೆಯಲ್ಲಿ ಈಗಾಗಲೇ ೨೦೨೧ರ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯನ್ನು ಜಿಪಿಎಸ್ ಆಧಾರಿತ ಮೊಬೈಲ್ ಆ್ಯಪ್ ಬಳಸಿ ನಡೆಸಲಾಗಿರುತ್ತದೆ. ಬೆಳೆ ಸಮೀಕ್ಷೆ ಮೂಲಕ ಸಂಗ್ರಹಿಸಿದ ಬೆಳೆ ಮಾಹಿತಿಯು ಮೇಲ್ವಿಚಾರಕರ ಮೂಲಕ ಅನುಮೋದನೆ ಮಾಡಿದ ನಂತರ ಈ ಮಾಹಿತಿಯನ್ನು ಬೆಂಬಲ ಬೆಲೆಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗಾಗಿ, ಬೆಳೆ ವಿಮೆ ಯೋಜನೆಗಾಗಿ, ಬೆಳೆ ನಷ್ಟ ಪರಿಹಾರ ನೀಡುವ ಸಮಯದಲ್ಲಿ, ಪಹಣಿಯಲ್ಲಿ (ಆರ್ಟಿಸಿ) ಬೆಳೆ ನಮೂದಿಸಲು ಉಪಯೋಗಿಸಲಾಗುತ್ತದೆ.
ಆದ್ದರಿಂದ ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳನ್ನು ಸರಿಯಾಗಿ ನಮೂದಿಸಲಾಗಿದೆಯೇ ಎಂಬುದನ್ನು “ಬೆಳೆದರ್ಶಕ್-೨೦೨೧-೨೨”ಎಂಬ ಆಪ್ ಅನ್ನು ಪ್ಲೇಸ್ಟೋರ್ನಲ್ಲಿ ಡೌನ್ಲೋಡ್ hಣಣಠಿ://ಠಿಟಚಿಥಿ.googಟe.ಛಿom/sಣoಡಿe/ಚಿಠಿಠಿs/ಜeಣಚಿiಟs?iಜ= ಛಿom.ಛಿಡಿoಠಿ.oಜಿಜಿಛಿsಡಿeಠಿoಡಿಣs ಞhಚಿಡಿiಜಿ_೨೦೨೧ ಮಾಡಿಕೊಂಡು ನೋಡಬಹುದು. ಬೆಳೆಗಳ ಫೋಟೋ ಅಪ್ಲೋಡ್ ಮಾಡಿರುವುದರಲ್ಲಿ ಯಾವುದೇ ಲೋಪದೋಷಗಳು ಕಂಡುಬAದಲ್ಲಿ “ಬೆಳೆದರ್ಶಕ್-೨೦೨೧” ಆ್ಯಪ್ನಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
ಬೆಳೆ ದರ್ಶಕ್ ಆ್ಯಪ್ನ ಕುರಿತು ಮಾಹಿತಿ: ತಮ್ಮ ಜಮೀನಿನಲ್ಲಿ ಬೆಳೆ ಸಮೀಕ್ಷೆ ಪ್ರಕಾರ ದಾಖಲಾಗಿರುವ ಬೆಳೆ ವಿವರಗಳು ಮತ್ತು ವಿಸ್ತೀರ್ಣದ ಮಾಹಿತಿ ಪಡೆಯಬಹುದು. ಬೆಳೆ ಸಮೀಕ್ಷೆ ಸಮಯದಲ್ಲಿ ನಿಮ್ಮ ಜಮೀನಿನಲ್ಲಿ ತೆಗೆಯಲಾದ ಜಿಪಿಎಸ್ ಆಧಾರಿತ ಛಾಯಾಚಿತ್ರಗಳನ್ನು ವೀಕ್ಷಿಸಬಹುದು. ತಮ್ಮ ಜಮೀನಿನ ಬೆಳೆ ಸಮೀಕ್ಷೆ ಮಾಡಿದವರ ಹೆಸರು ಮತ್ತು ಮೊಬೈಲ್ ಸಂಖ್ಯೆಯ ವಿವರ ಪಡೆಯಬಹುದು. ನೀವು ಬೆಳೆ ಸಮೀಕ್ಷೆ ಪ್ರಕಾರ ದಾಖಲಿಸಿದ ಮಾಹಿತಿಯನ್ನು ಮೇಲ್ವಿಚಾರಣೆ ಮಾಡುವ ಅಧಿಕಾರಿಗಳು ಅಂಗೀಕರಿಸಿದ್ದಾರೋ ಇಲ್ಲವೋ ಎಂದು ಷರಾ ಕಾಲಂನಲ್ಲಿ ತಿಳಿಯಬಹುದು. ಬೆಳೆ ಸಮೀಕ್ಷೆ ವಿವರ ತಪ್ಪಾಗಿ ದಾಖಲಾಗಿದ್ದಲ್ಲಿ ಆಕ್ಷೇಪಣೆ ಸಲ್ಲಿಸಬಹುದು. ಮೇಲ್ವಿಚಾರಣೆ ಮಾಡುವ ಸರ್ಕಾರಿ ಅಧಿಕಾರಿಗಳು ಆಕ್ಷೇಪಣೆ ಕುರಿತು ಏನು ಕ್ರಮಕೈಗೊಂಡಿದ್ದಾರೆ ಎಂದು ತಿಳಿಯಬಹುದು.
ಈ ರೀತಿಯಾಗಿ ದಾಖಲಾಗಿರುವ ಎಲ್ಲಾ ಆಕ್ಷೇಪಣೆಗಳನ್ನು ಸಂಬAಧಪಟ್ಟ ಮೇಲ್ವಿಚಾರಕರಿಗೆ ತಂತ್ರಾAಶದಲ್ಲಿ ಗುರುತಿಸಲಾಗುತ್ತದೆ. ಮೇಲ್ವಿಚಾರಕರು ಆಕ್ಷೇಪಣೆಗಳನ್ನು ಪರಿಶೀಲಿಸಿ ಅವುಗಳನ್ನು ತುರ್ತಾಗಿ ಇತ್ಯರ್ಥ ಪಡಿಸಲಾಗುವುದು. ಮೇಲ್ವಿಚಾರಕರು ಸ್ವೀಕೃತವಾಗಿರುವ ಪ್ರತಿಯೊಂದು ಆಕ್ಷೇಪಣೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈಗಾಗಲೇ ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯೊಂದಿಗೆ ಹೋಲಿಸಿ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲಾಗುವುದು.
ಬೆಳೆ ಸಮೀಕ್ಷೆ ದತ್ತಾಂಶದಲ್ಲಿ ಲಭ್ಯವಿರುವ ಬೆಳೆ ಮಾಹಿತಿಯ ಆಧಾರದ ಮೇರೆಗೆ ಇತ್ಯರ್ಥಪಡಿಸಲು ಸಾಧ್ಯವಿಲ್ಲದ ಸನ್ನಿವೇಶದಲ್ಲಿ ಮೇಲ್ವಿಚಾರಕರೇ ಖುದ್ದಾಗಿ ಮಹಜರು ದಾಖಲಿಸುವ ಮೂಲಕ ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸುವರು. ಬೆಳೆ ಸಮೀಕ್ಷೆ ಕೈಗೊಳ್ಳದೇ ಬಾಕಿ ಇರುವ ತಾಕುಗಳನ್ನು ಬೆಳೆ ಸಮೀಕ್ಷೆ ತಂತ್ರಾAಶದಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿರುತ್ತದೆ. ಆದ್ದರಿಂದ ಬೆಳೆ ಸಮೀಕ್ಷೆ ಕುರಿತು ಯಾವುದೇ ಆಕ್ಷೇಪಣೆ ಇದ್ದಲ್ಲಿ ಕೂಡಲೇ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.