ಮಡಿಕೇರಿ, ನ. ೨೧: ವೀರಾಜಪೇಟೆ ಪಟ್ಟಣ ಪಂಚಾಯಿತಿ ಯಲ್ಲಿ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿವು, ತುಳಸಿ ಮತ್ತು ವೇಲ ಅವರು ಹಲವು ತಿಂಗಳಿAದ ಕರ್ತವ್ಯಕ್ಕೆ ಗೈರುಹಾಜರಾಗಿರುವ ಹಿನ್ನೆಲೆ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಡಾ. ಬಿ. ಸತೀಶ ಅವರು ತಾ. ೧೫ ರಂದು ವೀರಾಜಪೇಟೆ ಪಟ್ಟಣ ಪಂಚಾಯಿತಿ ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಮೂವರ ಅನಧಿಕೃತ ಗೈರು ಹಾಜರಿ ಬಗ್ಗೆ ದೂರು ಬಂದ ಹಿನ್ನೆಲೆ ಜಿಲ್ಲಾಧಿಕಾರಿ ಅವರು ಇವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.