ವೀರಾಜಪೇಟೆ, ನ. ೨೧: ರಾಜ್ಯ ಕಾನೂನು ಸೇವೆಗಳ ನಿರ್ದೇಶನದಂತೆ ತಾಲೂಕು ಕಾನೂನು ಸೇವೆಗಳ ಸಮಿತಿ ಡಿ. ೧೮ ರಂದು ನ್ಯಾಯಾಲಯದಲ್ಲಿ ನಡೆಯಲಿರುವ ರಾಷ್ಟಿçÃಯ ಮೆಗಾ ಲೋಕ ಅದಾಲತ್‌ನಲ್ಲಿ ಬಾಕಿಯಿರುವ ರಾಜಿಯಾಗುವಂತ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಚರ್ಚಿಸಲು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಜಿ. ಲೋಕೇಶ್ ಅಧ್ಯಕ್ಷತೆಯಲ್ಲಿ ಇಲ್ಲಿನ ನ್ಯಾಯಾಲಯದ ಸಭಾಂಗಣದಲ್ಲಿ ಪೂರ್ವಬಾವಿ ಸಭೆ ನಡೆಯಿತು.
ಸಭೆಯಲ್ಲಿ ನ್ಯಾಯಾಧೀಶರಾದ ಎನ್.ವಿ.ಕೋನಪ್ಪ, ಮತ್ತು ಮಹಾಲಕ್ಷಿö್ಮ, ತಾಲೂಕು ತಹಶೀಲ್ದಾರ್ ಆರ್ ಯೋಗನಂದ, ವಕೀಲರ ಸಂಘದ ಅಧ್ಯಕ್ಷ ಐ.ಆರ್. ಪ್ರಮೋದ್, ಸರ್ಕಾರಿ ಅಭಿಯೋಜಕರು, ಪೊಲೀಸ್ ಇಲಾಖೆ, ಹಿರಿಯ ಕಾರ್ಮಿಕ ಅಧಿಕಾರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಸೆಸ್ಕಾಂ ಮತ್ತು ಅರಣ್ಯ ಇಲಾಖೆ ಸೇರಿದಂತೆ ಇತರ ಅಧಿಕಾರಿಗಳು ಭಾಗವಹಿಸಿದ್ದರು.