ಕೊಡ್ಲಿಪೇಟೆ, ನ. ೨೧: ಕಳೆದ ಕೆಲ ಸಮಯದಿಂದ ಪಟ್ಟಣದಲ್ಲಿ ನಿರ್ಗತಿಕರಾಗಿ ಅಲೆಯುತ್ತಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ನೆರವಿಗೆ ನಿಂತ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು, ಆಕೆಯನ್ನು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಕೊಡ್ಲಿಪೇಟೆ ಪಟ್ಟಣದಲ್ಲಿ ಅಲೆದಾಡುತ್ತಿದ್ದ ಈ ಮಹಿಳೆಯನ್ನು ಗಮನಿಸಿದ ಪೊಲೀಸ್ ಸಿಬ್ಬಂದಿ ಸಿದ್ದಯ್ಯ ಅವರು ಶಿವರಾಮೇಗೌಡ ಬಣದ ಕರವೇ ಕಾರ್ಯಕರ್ತರ ಗಮನಕ್ಕೆ ತಂದ ಹಿನ್ನೆಲೆ, ವೇದಿಕೆಯ ತಾಲೂಕು ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ, ಯೋಗೇಶ್ ಮತ್ತು ವಿಜಯಕುಮಾರ್ ಅವರುಗಳು, ಮಹಿಳೆಯನ್ನು ಬೆಂಗಳೂರಿನ ಆಟೋ ರಾಜ ಫೌಂಡೇಷನ್‌ಗೆ ದಾಖಲಿಸಿದ್ದಾರೆ.

ಕೊಡ್ಲಿಪೇಟೆ ಗ್ರಾಮ ಪಂಚಾಯಿತಿಯಿAದ ಅಗತ್ಯ ದಾಖಲೆಗಳನ್ನು ಪಡೆದು, ಆರೋಗ್ಯ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ನಡೆಸಿದ ನಂತರ ಕರವೇ ಕಾರ್ಯಕರ್ತರು ಬೆಂಗಳೂರಿಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.