ಮಡಿಕೇರಿ, ನ. ೨೧: ರೈತರ ಅನುಕೂಲಕ್ಕಾಗಿ ಫ್ರೂಟ್ಸ್ ತಂತ್ರಾAಶ ರೈತ ನೋಂದಣಿ ಮತ್ತು ಏಕೀಕೃತ ಫಲಾನುಭವಿ ಮಾಹಿತಿ ವ್ಯವಸ್ಥೆ (ಫಾರ್ಮರ್ ರಿಜಿಸ್ಟೆçÃಷನ್ ಮತ್ತು ಯುನಿಫೆಡ್ ಬೆನಿಫಿಸಿಯರಿ ಇನ್ಪಾರೇಷನ್ ಸಿಸ್ಟಮ್-ಪ್ರೂಟ್ಸ್) ಅಭಿವೃದ್ಧಿಗೊಳಿಸಿದ್ದು, ಸವಲತ್ತುಗಳನ್ನು ಪಡೆಯಲು ಬಯಸುವ ರೈತರು, ವ್ಯಕ್ತಿಯ ನೋಂದಣಿಗೆ ಅನುಕೂಲ ಮಾಡಿ ಕೊಡುತ್ತದೆ ಹಾಗೂ ಫಲಾನು ಭವಿಗಳು ಪಡೆಯುವ ಪ್ರಯೋಜ ನಗಳ ವಿವರಗಳನ್ನು ಫ್ರೂಟ್ಸ್ ತಂತ್ರಾAಶದಲ್ಲಿ ದಾಖಲಿಸಲಾಗುತ್ತದೆ.

ರೈತರು ಜಮೀನಿಗೆ ಸಂಬAಧಿಸಿದ ವಿವರಗಳನ್ನು ಫ್ರೂಟ್ಸ್ ತಂತ್ರಾAಶದಲ್ಲಿ ನೋಂದಾಯಿಸಿ ಕೊಂಡು ಗುರುತಿನ ಸಂಖ್ಯೆ (ಎಫ್‌ಐಡಿ) ಪಡೆಯಬಹುದು. ಕೃಷಿ, ತೋಟಗಾರಿಕೆ, ರೇಷ್ಮೆ, ಪಶು ಸಂಗೋಪನೆ ಮತ್ತು ಇತರ ಸಂಬAಧಿಸಿದ ಇಲಾಖೆಗಳಿಂದ ದೊರೆಯುವ ಸಹಾಯಧನ ಸೌಲಭ್ಯ ಪಡೆಯಲು ಮತ್ತು ಬೆಂಬಲ ಬೆಲೆ, ಬೆಳೆ ವಿಮೆ, ಬೆಳೆ ಸಾಲ, ಬೆಳೆ ಹಾನಿ ಪರಿಹಾರ ಹಾಗೂ ಯೋಜನೆಗಳಿಗೆ ಪ್ರೂಟ್ಸ್ ಸಂಖ್ಯೆ ಬಳಸಲಾಗುವುದು.

ಆದ್ದರಿಂದ ಈವರೆಗೆ ಪ್ರೂಟ್ಸ್ ತಂತ್ರಾAಶದಲ್ಲಿ ನೋಂದಣಿಯಾಗದ ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ, ಮೊಬೈಲ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ, ಭಾವಚಿತ್ರ ಮತ್ತು ಮೀಸಲಾತಿಗೆ ಸಂಬAಧಿಸಿದ ಜಾತಿ ಪ್ರಮಾಣ ಪತ್ರ ಒದಗಿಸಿ ಕೂಡಲೇ ನೊಂದಾಯಿಸಿಕೊಳ್ಳುವAತೆ ಕೋರಿದೆ.

ಈಗಾಗಲೇ ನೋದಾಯಿಸಿ ರೈತರ ಗುರುತಿನ ಸಂಖ್ಯೆ(ಎಫ್‌ಐಡಿ) ಹೊಂದಿರುವ ರೈತರು ತಮ್ಮ ಜಮೀನಿನ ಎಲ್ಲಾ ಸರ್ವೆ ನಂಬರ್‌ಗಳನ್ನು ಪ್ರೂಟ್ಸ್ ತಂತ್ರಾAಶದಲ್ಲಿ ಸೇರ್ಪಡೆ ಮಾಡುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೃಷಿ ಇಲಾಖೆ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆ ಹಾಗೂ ಸಮೀಪದ ಗ್ರಾಮ ಲೆಕ್ಕಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.