ಸೋಮವಾರಪೇಟೆ, ನ. ೨೧: ಸೋಮವಾರಪೇಟೆ ತಾಲೂಕಿನ ಮಾದಾಪುರ ಹಾಗೂ ಶನಿವಾರಸಂತೆಯಲ್ಲಿ ನಡೆದ ಪ್ರಕರಣಗಳಿಗೆ ಸಂಬAಧಿಸಿದAತೆ ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಪೊಲೀಸರು ಸುಳ್ಳು ಮೊಕದ್ದಮೆ ದಾಖಲಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದು, ಇದನ್ನು ತಕ್ಷಣ ನಿಲ್ಲಿಸಬೇಕೆಂದು ಬಿಜೆಪಿ ಮಂಡಲ ಘಟಕದ ಅಧ್ಯಕ್ಷ ಮನುಕುಮಾರ್ ರೈ ಆಗ್ರಹಿಸಿದ್ದಾರೆ.

ಒಂದು ಕೋಮಿನವರನ್ನು ತೃಪ್ತಿಪಡಿಸಲು ಪೊಲೀಸ್ ಇಲಾಖೆ ಬಿಜೆಪಿ ಹಾಗೂ ಸಂಘ ಪರಿವಾರದ ಕಾರ್ಯಕರ್ತರ ಮೇಲೆ ಅನಾವಶ್ಯಕ ಕೇಸ್‌ಗಳನ್ನು ದಾಖಲು ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಓಲೈಸಲು ಸಣ್ಣಪುಟ್ಟ ಗಲಭೆಗಳಲ್ಲಿ ಕೊಲೆಯತ್ನ, ದರೋಡೆಯಂತಹ ಸೆಕ್ಷನ್‌ಗಳನ್ನು ದಾಖಲು ಮಾಡಿ ಜೈಲಿಗೆ ಕಳುಹಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.