ಸೋಮವಾರಪೇಟೆ, ನ. ೨೨: ಇಲ್ಲಿನ ಇಂದಿರಾಗಾAಧಿ ಅಭಿಮಾನಿ ಗಳ ಸಂಘ ಹಾಗೂ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನ ವನ್ನು ಆಚರಿಸಲಾಯಿತು.
ಪಟ್ಣಣದ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ, ಇಂದಿರಾ ಗಾಂಧಿ ಅವರ ಭಾವಚಿತ್ರಕ್ಕೆ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್ ಮಾಲಾರ್ಪಣೆ ಮಾಡಿದರು. ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಬಿ. ಬಸವರಾಜು, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎ. ನಾಗರಾಜು, ಹಿಂದುಳಿದ ಘಟಕದ ಅಧ್ಯಕ್ಷ ಸುರೇಂದ್ರ, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಹೆಚ್.ಬಿ. ರಾಜಪ್ಪ, ನಗರ ಕಾಂಗ್ರೆಸ್ ಕಾರ್ಯದರ್ಶಿ ಮಹಮ್ಮದ್ ಶಫಿ, ಇಂದಿರಾಗಾAಧಿ ಅಭಿಮಾನಿಗಳ ಸಂಘದ ಪದಾಧಿಕಾರಿ ಗಳಾದ ಹೆಚ್.ಎ. ಪಳನಿಸ್ವಾಮಿ, ಅಜಯ್, ರಘು, ರವಿ ಸೇರಿದಂತೆ ಇತರರು ಉಪಸ್ಥಿತರಿದ್ದರು.