ಮಡಿಕೇರಿ, ನ. ೨೩: ೨೦೨೦-೨೧ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲೆಯ ಒಳಗಿನ ಕೋರಿಕೆ ವರ್ಗಾವಣೆ ಕೌನ್ಸಿಲಿಂಗ್ ತಾ. ೨೪ ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.
ಅರ್ಹ ಶಿಕ್ಷಕರು ಕೌನ್ಸಿಲಿಂಗ್ನಲ್ಲಿ ಭಾಗವಹಿಸಲು ಸೂಚಿಸಲಾಗಿದೆ. ಹೆಚ್ಚಿನ ವಿವರಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿ, ದೂ. ೦೮೨೭೨-೨೨೮೩೩೭ ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೇದಮೂರ್ತಿ ತಿಳಿಸಿದ್ದಾರೆ.