ಸಿದ್ದಾಪುರ, ನ. ೨೨: ಸಿದ್ದಾಪುರದ ಘಟ್ಟದಳ ಬಳಿ ಒತ್ತುವರಿ ಆಗಿದ್ದ ಜಾಗವನ್ನು ಇದೀಗ ಸಿದ್ದಾಪುರ ಗ್ರಾ.ಪಂ. ತನ್ನ ಸ್ವಾಧೀನಕ್ಕೆ ಪಡೆದುಕೊಂಡಿದೆ. ಘಟ್ಟದಳ ಬಳಿ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದ ಮಾಲೀಕರಿಂದ ವೀರಾಜಪೇಟೆ ತಾಲೂಕಿನ ಹಿಂದಿನ ತಹಶೀಲ್ದಾರ್ ಗೋವಿಂದರಾಜ್ ಹಾಗೂ ಕಂದಾಯ ಇಲಾಖಾಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷೆ ತೀತಮಾಡ ರೀನಾ ತುಳಸಿ ನೇತೃತ್ವದಲ್ಲಿ ಒತ್ತುವರಿ ಜಾಗವನ್ನು ತಮ್ಮ ಸ್ವಾಧೀನಕ್ಕೆ ಪಡೆದುಕೊಂಡು ಕಸ ವಿಲೇವಾರಿ ಘಟಕ ಪ್ರಾರಂಭಿಸಲು ನಿರ್ಧರಿಸಿದ್ದಾರೆ. ಗ್ರಾ.ಪಂ ಸದಸ್ಯರುಗಳ ಸಮ್ಮುಖದಲ್ಲಿ ೫೦ ಸೆಂಟ್ ಜಾಗಕ್ಕೆ ಬೇಲಿ ಹಾಕಿ ನಾಮಫಲಕ ಅಳವಡಿಸಲಾಗಿದೆ. ಸಿದ್ದಾಪುರ ಗ್ರಾ.ಪಂ. ಸದಸ್ಯರುಗಳಾದ ಪ್ರೇಮ, ಸೈನುಲ್ಲಾ, ಹಸನ್, ಪೂರ್ಣಿಮ, ಎಂ.ಎ ಆನಂದ, ಗ್ರಾ.ಪಂ ಉಪಾಧ್ಯಕ್ಷ ಮಹೇಶ್ ಕುಮಾರ್ ಹಾಜರಿದ್ದರು