ಮಡಿಕೇರಿ, ನ. ೨೩: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಮತ್ತು ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ ೪ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ತಾ. ೨೯ರಂದು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಜಾನಪದ ಗೀತಗಾಯನ ಸ್ಪರ್ಧೆ, ಸಾರ್ವಜನಿಕರಿಗೆ ಭಾವಗೀತೆ ಗಾಯನ ಸ್ಪರ್ಧೆ ಏರ್ಪಡಿಸಲಾಗಿದೆ ಎಂದು ಬಳಗದ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ತಿಳಿಸಿದ್ದಾರೆ. ಸ್ಪರ್ಧೆಗಳು ಮಡಿಕೇರಿ ನಗರ ವ್ಯಾಪ್ತಿಗೆ ಸೀಮಿತಗೊಂಡಿರುತ್ತದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪ್ರತಿಶಾಲೆಯಿಂದ ಇಬ್ಬರಿಗೆ ಅವಕಾಶ ಕಲ್ಪಿಸಲಾಗಿದೆ. ಸ್ಪರ್ಧೆಗೆ ಬರುವಾಗ ಶಾಲಾ ದೃಢೀಕರಣ ಪತ್ರ ತರಬೇಕಾಗಿದೆ.

ಅದೇ ದಿನ ಸಂಜೆ ೩.೩೦ ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಜಿಲ್ಲೆಯಲ್ಲಿ ೨೦೨೦-೨೧ ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕಗಳಿಸಿದ ಜಿಲ್ಲೆಯ ವಿದ್ಯಾರ್ಥಿಗಳಿಗೆ ಟಿ.ಪಿ. ರಮೇಶ್ ದತ್ತಿನಿಧಿ ಪ್ರಶಸ್ತಿ ವಿತರಣೆ ಮತ್ತು ಗಾಯನ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಲಿದೆ.

ಆಸಕ್ತರು ಬಳಗದ ಉಪಾಧ್ಯಕ್ಷೆ ಪಿ. ರೇವತಿ ರಮೇಶ್ ೯೬೬೩೨೫೪೮೨೯ಯನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳುವAತೆ ಬಳಗದ ಪ್ರಧಾನ ಕಾರ್ಯದರ್ಶಿ ವಿಲ್ಫರ್ಡ್ ಕ್ರಾಸ್ತಾ ತಿಳಿಸಿದ್ದಾರೆ.