ಮಡಿಕೇರಿ, ನ. ೨೨: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದಿಂದ ಸಫಾಯಿ ಕರ್ಮಚಾರಿಗಳು ಹಾಗೂ ಮ್ಯಾನ್ಯುಯಲ್ ಸ್ಕಾö್ಯವೆಂರ್ಸ್ಗಳ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕಾö್ಯವೆಂಜರ್ಗಳ ನೋಂದಾಯಿತ ಸಂಘ-ಸAಸ್ಥೆಗಳಿಗೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಶೇ. ೭೫ ರಷ್ಟು ಸಹಾಯಧನ ನೀಡುವ ಯೋಜನೆ. ಸಫಾಯಿ ಕರ್ಮಚಾರಿ, ಪೌರಕಾರ್ಮಿಕರು ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಗಳ ಮಕ್ಕಳಿಗೆ ಆನ್ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಟ್ಯಾಬ್ ವಿತರಣಾ ಯೋಜನೆ. ಫಲಾಪೇಕ್ಷಿಗಳು ಆನ್ಲೈನ್ ಮೂಲಕ ಅರ್ಜಿಗಳನ್ನು ಮತ್ತು ದಾಖಲಾತಿಗಳನ್ನು ನಿಗಮದ ವೆಬ್ಸೈಟ್ ಞssಞಜಛಿ೦೩ @mಚಿiಟ.ಛಿom ಮೂಲಕ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಲು ಡಿಸೆಂಬರ್ ೧೫ ವರೆಗೆ ವಿಸ್ತರಿಸಲಾಗಿದೆ. ಆದ್ದರಿಂದ ಡಿಸೆಂಬರ್ ೧೫ ರೊಳಗೆ ವೆಬ್ಸೈಟ್ ಞssಞಜಛಿ೦೩ @mಚಿiಟ.ಛಿom ನಲ್ಲಿ ಅರ್ಜಿ ಸಲ್ಲಿಸಿ, ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ, ಮಡಿಕೇರಿ ಕೊಡಗು ಜಿಲ್ಲೆ-೫೭೧೨೦೧ ದೂ.ಸಂ.೦೮೨೭೨-೨೨೮೮೫೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.