ಮಡಿಕೇರಿ, ನ. ೨೩: ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ವತಿಯಿಂದ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳು ನಡೆದವು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರು, ಕನ್ನಡ ನಾಡು ನುಡಿ ಕಟ್ಟಿ ಬೆಳೆಸುವಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕಿದೆ ಎಂದರು.

ಕನ್ನಡ ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪ್ರತಿಯೊಬ್ಬರೂ ತೊಡಗಿಸಿಕೊಳ್ಳಬೇಕು. ಕನ್ನಡ ಸಾಹಿತ್ಯ ಬೆಳವಣಿಗೆಗೆ ಎಲ್ಲರೂ ಕೈಜೋಡಿಸು ವಂತಾಗಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ವಿದ್ಯಾರ್ಥಿ ಗಳಲ್ಲಿ ಸಾಹಿತ್ಯ ಅಭಿರುಚಿ ಬೆಳೆಸಲು ಕನ್ನಡ ಜಾಗೃತಿ ಸಮಿತಿ ವತಿಯಿಂದ ವಿವಿಧ ಸ್ಪರ್ಧೆಗಳು ನಡೆಯುತ್ತಿರು ವುದು ಒಳ್ಳೆಯ ಬೆಳವಣಿಗೆ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಯುವಜನರು ಹೆಚ್ಚು ಪಾಲ್ಗೊಳ್ಳಬೇಕು. ಸಾಹಿತ್ಯದ ಅರಿವು ಪ್ರತಿಯೊಬ್ಬರಲ್ಲಿ ಇದ್ದಾಗ ಭಾಷೆ ಅಭಿವೃದ್ಧಿಗೆ ಸಹಕಾರಿ ಯಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್. ಮಹೇಶ್ ಅವರು ಮಾತನಾಡಿ, ವಿದ್ಯಾರ್ಥಿಗಳು ಚಿಕ್ಕಂದಿನಿAದಲೇ ದಿನಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಇದರಿಂದ ಸಾಹಿತ್ಯ ಅಭಿರುಚಿ ಬೆಳೆಯಲು ಸಾಧ್ಯ ಎಂದರು. ಕನ್ನಡ ಜಾಗೃತಿ ಸಮಿತಿಯ ತಾಲೂಕು ಸದಸ್ಯರುಗಳಾದ ಭಾರತಿ ರಮೇಶ್, ಇ. ರಾಜು, ತಾಲೂಕು ಕರ್ನಾಟಕ ಹಿತರಕ್ಷಣಾ ವೇದಿಕೆಯ ಅಧ್ಯಕ್ಷ ರವಿಗೌಡ ಅವರು ಮಾತನಾಡಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ರೇವತಿ ರಮೇಶ್, ಸರ್ಕಾರಿ ಪ್ರೌಢಶಾಲೆ ಉಪ ಪ್ರಾಂಶುಪಾಲೆ ನಳಿನಿ ಇತರರು ಇದ್ದರು. ಕಡ್ಲೇರ ತುಳಸಿ ಮೋಹನ್ ನಿರೂಪಿಸಿದರು. ಕ.ಸಾ.ಪ. ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರನ್ನು ಜಾಗೃತಿ ಸಮಿತಿ ವತಿಯಿಂದ ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು.