ಭಾರೀ ಮಳೆ: ರಸ್ತೆ ದುರಸ್ತಿಗೆ ೫೦೦ ಕೋಟಿ : ಸಂಪೂರ್ಣ ಮನೆ ಹಾನಿಗೆ ೧ ಲಕ್ಷ

ಬೆಂಗಳೂರು, ನ. ೨೨: ರಾಜ್ಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಂಟಾಗಿರುವ ಹಾನಿಗೆ ಸಂಬAಧಿಸಿದAತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಘೋಷಣೆ ಮಾಡಿದ್ದು, ರಸ್ತೆ ದುರಸ್ತಿಗೆ ೫೦೦ ಕೋಟಿ ರೂ. ಹಾಗೂ ಸಂಪೂರ್ಣ ಮನೆ ಹಾನಿಗೆ ೧ ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ. ಮಳೆ ಹಾನಿ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾ¬ ಹಾನಿಯಾದ ರಸ್ತೆ ದುರಸ್ತಿಗೆ ೫೦೦ ಕೋಟಿ ರೂ. ನೀಡಲಾಗಿದೆ. ಮನೆ ಸಂಪೂರ್ಣ ಹಾನಿಯಾಗಿದ್ದರೆ ೧ ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ತಕ್ಷಣವೇ ೧ ಲಕ್ಷ ರೂ. ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಭಾಗಶಃ ಮನೆ ಹಾನಿಗೆ ಹಣ ಬಿಡುಗಡೆಗೂ ಆದೇಶಿಸಿದ್ದೇನೆ ಎಂದು ತಿಳಿಸಿದರು. ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ ಜಿಲ್ಲೆಯಲ್ಲಿ ಹೆಚ್ಚು ಹಾನಿಯಾಗಿದೆ.

ಆ್ಯಪ್‌ನಲ್ಲಿ ದಾಖಲಾಗಬೇಕು

ಇದೇ ವೇಳೆ ಬೆಳೆ ಸಮೀಕ್ಷೆ ಪರಿಹಾರ ಆ್ಯಪ್‌ನಲ್ಲಿ ಎಂಟ್ರಿಯಾಗಬೇಕು. ಅದರಂತೆ ಬೆಳೆ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ ಬೊಮ್ಮಾಯಿ ಅವರು, ರಾಜ್ಯದಲ್ಲಿ ಡಿಸಿಗಳ ಖಾತೆಯಲ್ಲಿ ೬೮೯ ಕೋಟಿ ರೂ. ಇದೆ. ಅಗತ್ಯವಿದ್ದಲ್ಲಿ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಬೊಮ್ಮಾಯಿ ಸೂಚಿಸಿದ್ದಾರೆ. ಕೃಷಿ, ಕಂದಾಯ, ತೋಟಗಾರಿಕೆ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿರುವ ಸಿಎಂ, ಬೆಳೆ ನಷ್ಟ ಪರಿಹಾರ ವಿತರಣೆಯೂ ತ್ವರಿತವಾಗಿ ಆಗಬೇಕು. ೧೫ರಿಂದ ೨೦ ದಿನ ಬೆಳೆ ಹಾನಿ ಸಮೀಕ್ಷೆ ನಡೆಸಲು ತಿಳಿಸಲಾಗಿದೆ. ಆಗಸ್ಟ್, ಸೆಪ್ಟೆಂಬರ್‌ನಲ್ಲಾದ ಬೆಳೆ ಹಾನಿಗೆ ೧.೫ ಲಕ್ಷ ರೈತರಿಗೆ ೧೩೦ ಕೋಟಿ ರೂ. ಬಿಡುಗಡೆಯಾಗಿದೆ. ಉಳಿದ ೭೯,೦೦೦ ರೈತರಿಗೆ ೫೨ ಕೋಟಿ ರೂ. ಕೂಡಲೇ ಬಿಡುಗಡೆ ಮಾಡಲಾಗುವುದೆಂದು ಬೊಮ್ಮಾಯಿ ಮಾಹಿತಿ ನೀಡಿದರು.

ಕೋವಿಡ್-೧೯: ರಾಜ್ಯದಲ್ಲಿಂದು ೧೭೮ ಹೊಸ ಪ್ರಕರಣ ಪತ್ತೆ

ಬೆಂಗಳೂರು, ನ. ೨೨: ರಾಜ್ಯದಲ್ಲಿ ಕೊರೊನಾ ಏರಿಳಿತ ಮುಂದುವರೆದಿದ್ದು, ಕಳೆದ ೨೪ ಗಂಟೆಗಳಲ್ಲಿ ೧೭೮ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ೨೯,೯೩,೭೭೭ಕ್ಕೆ ಏರಿಕೆಯಾಗಿದೆ. ೩೭೩ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ ೬೮೬೭ ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿAದ ಇಂದು ಇಬ್ಬರು ಮೃತಪಟ್ಟಿದ್ದು, ಒಟ್ಟಾರೇ ಮೃತರ ಸಂಖ್ಯೆ ೩೮,೧೭೭ ಏರಿಕೆಯಾಗಿದೆ. ಒಟ್ಟು ಸೋಂಕಿನ ಸಂಖ್ಯೆ ಶೇ. ೦.೩೧ ರಷ್ಟಿದ್ದು,ಮರಣ ಪ್ರಮಾಣ ಶೇ. ೧. ೧೨ ರಷ್ಟಿದೆ. ಬೆಂಗಳೂರಿನಲ್ಲಿ ೧೧೨ ಸೋಂಕಿತರು ಪತ್ತೆಯಾಗಿದ್ದು, ೩೦೦ ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ರಾಮನಗರ, ಶಿವಮೊಗ್ಗ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

೩ ರಾಜಧಾನಿ ಮಸೂದೆ ಹಿಂಪಡೆತ': ಆಂಧ್ರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರ

ಅಮರಾವತಿ, ನ. ೨೨: ಆಂಧ್ರ ಪ್ರದೇ± ಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಹಿಂಪಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ ೩ ರಾಜಧಾನಿ ಮಸೂದೆಯನ್ನು ಆಂಧ್ರ ಅಸೆಂಬ್ಲಿಯಲ್ಲಿ ಹಿಂದಕ್ಕೆ ಪಡೆದಿದೆ. ಈ ಹಿಂದೆ ಸಿಎಂ ಆಗಿದ್ದ ಚಂದ್ರಬಾಬು ನಾಯ್ಡು ಅವರು ಅಮರಾವತಿಯನ್ನು ರಾಜಧಾನಿಯಾಗಿ ಘೋಷಣೆ ಮಾಡಿ ಅಲ್ಲಿನ ರೈತರಿಂದ ಭಾರೀ ಪ್ರಮಾಣದ ಕೃಷಿ ಭೂಮಿಗಳನ್ನು ರಾಜಧಾನಿ ನಿರ್ಮಾಣಕ್ಕಾಗಿ ವಶಕ್ಕೆ ಪಡೆದಿದ್ದರು. ಅಲ್ಲದೆ ಹಲವಾರು ವಲಯಗಳ ಅಭಿವೃದ್ಧಿ ಕಾಮಗಾರಿ ಕೂಡ ನಡೆದಿತ್ತು. ಆದರೆ ಬಳಿಕ ಅಧಿಕಾರಕ್ಕೆ ಬಂದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮೂರು ರಾಜಧಾನಿಗಳನ್ನು ಘೋಷಣೆ ಮಾಡಿತ್ತು. ಈ ವಿವಾದಿತ ಮಸೂದೆಯಲ್ಲಿ ಕಾರ್ಯಕಾರಿ ರಾಜಧಾನಿಯಾಗಿ ವಿಶಾಖಪಟ್ಟಣಂ, ಶಾಸಕಾಂಗ ರಾಜಧಾನಿಯಾಗಿ ಅಮರಾವತಿ, ನ್ಯಾಯಾಂಗ ರಾಜಧಾನಿ ಕರ್ನೂಲ್ ಜಿಲ್ಲೆಯನ್ನು ಪ್ರಸ್ತಾಪಿಸಲಾಗಿತ್ತು. ಆದರೆ ಈ ತ್ರಿವಿಧೀಕರಣ ಮಸೂದೆಯನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಇದೀಗ ಅಮರಾವತಿ ರೈತರ ಮತ್ತು ಹಲವಾರು ವಲಯಗಳ ತೀವ್ರ ಪ್ರತಿರೋಧದ ಹಿನ್ನಲೆಯಲ್ಲಿ ಆಂಧ್ರಪ್ರದೇಶದ ರಾಜ್ಯ ಸರಕಾರವು ವಿವಾದಾತ್ಮಕ ಮೂರು ರಾಜಧಾನಿ ಮಸೂದೆಯನ್ನು ಹಿಂಪಡೆಯಲು ನಿರ್ಧರಿಸಿದೆ. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ರಾಜ್ಯ ವಿಧಾನಸಭೆಯಲ್ಲಿ ಪ್ರಮುಖ ಘೋಷಣೆ ಮಾಡುವ ನಿರೀಕ್ಷೆಯಿದೆ.

ಅಭಿನಂದನ್ ವರ್ಧಮಾನ್‌ಗೆ ವೀರಚಕ್ರ ಪದಕ ಪ್ರದಾನ

ನವದೆಹಲಿ, ನ. ೨೨: ಇತ್ತೀಚಿಗೆ ಬಡ್ತಿ ಪಡೆದಿರುವ ಭಾರತೀಯ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಅವರಿಗೆ ಸೋಮವಾರ ರಾಷ್ಟçಪತಿ ರಾಮನಾಥ್ ಕೋವಿಂದ್ ಇಂದು ವೀರ ಚಕ್ರ ಪ್ರಶಸ್ತಿ ಪ್ರದಾನ ಮಾಡಿದರು. ಬಾಲಾಕೋಟ್ ವಾಯು ದಾಳಿಯ ನಂತರ ಭಾರತ ಮತ್ತು ಪಾಕ್ ಗಡಿಯಲ್ಲಿ ಹಾರಾಟ ನಡೆಸಿದ್ದ ಪಾಕ್ ವಾಯುಪಡೆಯ ವಿಮಾನವನ್ನು ಹೊಡೆದುರುಳಿಸಿದ ಕಾರಣಕ್ಕಾಗಿ ಅವರಿಗೆ ವೀರ ಚಕ್ರ ಪ್ರಶಸ್ತಿ ಗೌರವ ಲಭಿಸಿದೆ . ಈ ಘಟನೆ ನಂತರ ಅಭಿನಂದನ್ ವರ್ಧಮಾನ್ ಅವರನ್ನು ಪಾಕ್ ವಾಯುಪಡೆ ತನ್ನ ವಶಕ್ಕೆ ತೆಗೆದುಕೊಂಡು. ಭಾರತ ಮತ್ತು ಅಂತಾರಾಷ್ಟಿçÃಯ ಸಮುದಾಯದ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಪಾಕಿಸ್ತಾನ ಅವರನ್ನು ನಂತರ ಬೇಷರತ್ತಾಗಿ ಬಿಡುಗಡೆ ಮಾಡಿತ್ತು. ಪಾಕ್ ಆಕ್ರಮಿತ ಗಡಿಯಲ್ಲಿ, ಭಯೋತ್ಪಾದಕ ನೆಲೆಗಳ ಮೇಲೆ ಭಾರತೀಯ ವಾಯುಪಡೆ ಸರ್ಜಿಕಲ್ ದಾಳಿ ನಡೆಸಿ ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿತ್ತು. ನಂತರ ಸರ್ಜಿಕಲ್ ದಾಳಿ ವಿಚಾರ ದೇಶಾದ್ಯಂತ ಮನೆಮಾತಾಗಿ ಭಾರತೀಯ ವೀರ ಯೋಧರ ಸಾಹಸವನ್ನು ದೇಶ ಕೊಂಡಾಡಿತ್ತು.

ಪ್ರವಾಹಕ್ಕೆ ಆಂಧ್ರ ತತ್ತರ: ಸಾವಿನ ಸಂಖ್ಯೆ ೩೩ಕ್ಕೆ ಏರಿಕೆ

ಅಮರಾವತಿ, ನ. ೨೨: ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ೩೩ಕ್ಕೆ ಏರಿಕೆಯಾಗಿದೆ. ಆಂಧ್ರ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆ ಕಾರಣ ಪೆನ್ನಾ ನದಿ ಉಕ್ಕಿ ಹರಿದ ಪರಿಣಾಮ ದಕ್ಷಿಣ ಮತ್ತು ಪೂರ್ವಕ್ಕೆ ಸಂಪರ್ಕ ಕಲ್ಪಿಸುವ ಆಂಧ್ರಪ್ರದೇಶದ ಮುಖ್ಯ ರೈಲು ಮತ್ತು ರಸ್ತೆ ಮಾರ್ಗಗಳು ಕಡಿತಗೊಂಡಿವೆ. ಚೆನ್ನೆöÊ-ಕೋಲ್ಕತ್ತಾ ರಾಷ್ಟಿçÃಯ ಹೆದ್ದಾರಿ-೧೬ ಅನ್ನು ಎಸ್‌ಪಿಎಸ್ ನೆಲ್ಲೂರು ಜಿಲ್ಲೆಯ ಪಡುಗುಪಾಡುವಿನಲ್ಲಿ ಭಾರಿ ಪ್ರಮಾಣದ ನೀರು ಹರಿದ ಪರಿಣಾಮ ರಸ್ತೆ ಸಂಚಾರ ಸ್ಥಗಿತವಾಗಿದೆ. ಪಡುಗುಪಾಡು ರೈಲ್ವೆ ಹಳಿಯ ಮೇಲೆ ಪ್ರವಾಹ ಉಕ್ಕಿ ಹರಿಯುತ್ತಿದ್ದು ಚೆನ್ನೆöÊ-ವಿಜಯವಾಡ ಗ್ರಾö್ಯಂಡ್ ಟ್ರಂಕ್ ಮಾರ್ಗದಲ್ಲಿ ಕನಿಷ್ಟ ೧೭ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇತರ ಮೂರು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಅಥವಾ ಬೇರೆಡೆಗೆ ತಿರುಗಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ನಂದಲೂರು-ರಾಜAಪೇಟೆ ವಿಭಾಗದಲ್ಲಿ ಚೆಯ್ಯೆರು ಪ್ರವಾಹದ ಪರಿಣಾಮ ರೈಲ್ವೆ ಹಳಿ ಕೊಚ್ಚಿ ಹೋಗಿದ್ದು, ಪರಿಶೀಲನೆ ನಡೆಸಿದರು. ಟ್ರ‍್ಯಾಕ್ ಮರುಸ್ಥಾಪನೆ ಕಾರ್ಯಗಳು ಭರದಿಂದ ಸಾಗುತ್ತಿವೆ ಎಂದು ಎಸ್‌ಸಿಆರ್ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲಾ ಗುಣಮಟ್ಟದ ಸುರಕ್ಷತಾ ಮಾನದಂಡಗಳನ್ನು ಅನುಸರಿಸಿ ಮರುಸ್ಥಾಪನೆ ಕಾರ್ಯವನ್ನು ಯುದ್ಧೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಪ್ರಧಾನ ವ್ಯವಸ್ಥಾಪಕರು ಅಧಿಕಾರಿಗಳಿಗೆ ಸೂಚಿಸಿದರು. ಏತನ್ಮಧ್ಯೆ, ವಿಜಯವಾಡ ವಿಭಾಗದ ನೆಲ್ಲೂರು-ಪಡುಗುಪಾಡು ವಿಭಾಗದಲ್ಲಿ ರೈಲು ಹಳಿಯಲ್ಲಿ ನೀರು ತುಂಬಿರುವ ಕಾರಣ ಕನಿಷ್ಟ ೧೦ ಎಕ್ಸ್ಪ್ರೆಸ್ ರೈಲುಗಳನ್ನು ರದ್ದುಗೊಳಿಸಲಾಗಿದೆ.