ಕುಶಾಲನಗರ, ನ. ೨೩: ಸಮೀಪದ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ತಾಲೂಕು ಮಟ್ಟದ ಕಬಡ್ಡಿ ಹಾಗೂ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯಿತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಪಂದ್ಯಾಟವು ಕುಶಾಲನಗರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು.

ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಮೂಕಾಂಬಿಕ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಫೈನಲ್ ಪಂದ್ಯದಲ್ಲಿ ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವನ್ನು ಮಣಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಮೂಕಾಂಬಿಕ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡವು ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವನ್ನು ಮಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.

ಮೂಕಾಂಬಿಕಾ ವಿದ್ಯಾ ಸಂಸ್ಥೆಯ ಎಸ್.ಎಸ್. ಗೋಪಾಲ್, ಪ್ರಾಂಶುಪಾಲ ಚಂದನ್, ದೈಹಿಕ ಶಿಕ್ಷಣ ಶಿಕ್ಷಕ ಪ್ರತಾಪ್, ಶಿಕ್ಷಕರಾದ ಕಾಂತರಾಜ್, ಉಪನ್ಯಾಸಕಿಯರಾದ ಶ್ರೇಣಿ, ನಗೀನಬಾನು, ಸಂಸ್ಥೆಯ ಅಧ್ಯಕ್ಷೆ ಕೆ.ಪಿ. ಚಂದ್ರಕಲಾ ಮಾರ್ಗದರ್ಶನದಲ್ಲಿ ತಂಡ ಪಂದ್ಯಾಟದಲ್ಲಿ ಭಾಗವಹಿಸಿತ್ತು.