ಮಡಿಕೇರಿ, ನ. ೨೨: ಮುಂಬರುವ ವಿಧಾನ ಪರಿಷತ್ ಚುನಾವಣಾ ಅಭ್ಯರ್ಥಿಯಾಗಿ ಜಾತ್ಯತೀತ ಜನತಾದಳ (ಜೆಡಿಎಸ್) ಇಸಾಕ್‌ಖಾನ್ ಅವರನ್ನು ಕಣಕ್ಕಿಳಿಸಿದೆ.

ಕೊಡಗು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿರುವ ಇಸಾಕ್ ಖಾನ್ ಅವರನ್ನು ಪಕ್ಷ ತನ್ನ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ಹಣಬಲ ಮುಂಚೂಣಿಯಲ್ಲಿರುವ ಪ್ರಸ್ತುತದ ದಿನಗಳಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತ ಹಾಗೂ ಇದೇ ಪ್ರಥಮ ಬಾರಿಗೆ ಓರ್ವ ಅಲ್ಪಸಂಖ್ಯಾತ ಮುಸ್ಲಿಂ ಅಭ್ಯರ್ಥಿಗೆ ಜಿಲ್ಲೆಯಿಂದ ವಿಧಾನಪರಿಷತ್ತಿಗೆ ಸ್ಪರ್ಧಿಸಲು ಅವಕಾಶ ನೀಡಲಾಗುತ್ತಿದೆ. ಇದುವರೆಗೆ ಯಾವುದೇ ಪಕ್ಷ ಕೂಡ ಅವಕಾಶ ನೀಡಿರಲಿಲ್ಲ. ಇಸಾಕ್‌ಖಾನ್ ಅವರು ತಾ. ೨೩ ರಂದು (ಇಂದು) ಮಧ್ಯಾಹ್ನ ೧ ಗಂಟೆಗೆ ತಮ್ಮ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.