ಸಿದ್ದಾಪುರ, ನ. ೨೩: ಮರದಿಂದ ಕೆಳಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಸಿದ್ದಾಪುರ ಸಮೀಪದ ಅವರೆಗುಂದ ಗ್ರಾಮದಲ್ಲಿ ಮಂಗಳವಾರದAದು ಸಂಭವಿಸಿದೆ.

ಸಿದ್ದಾಪುರದ ಕರಡಿಗೋಡು ಗ್ರಾಮದ ಅವರೆಗುಂದ ನಿವಾಸಿಯಾಗಿರುವ ವೆಂಕಪ್ಪ ಎಂಬವರ ಪುತ್ರ ಹರೀಶ (೪೭) ಎಂಬವರೇ ಮೃತ ದುರ್ದೈವಿ. ಅವರೆಗುಂದದ ನಿವಾಸಿಯಾಗಿರುವ ಗುಲಾಬಿ ಎಂಬವರ ಮನೆಯ ಬಳಿ ತೆಂಗಿನ ಮರದಿಂದ ತೆಂಗಿನಕಾಯಿಗಳನ್ನು ಕುಯ್ಯುವ ಸಂದರ್ಭದಲ್ಲಿ ಆಕಸ್ಮಿಕವಾಗಿ ಮರದ ಮೇಲಿನಿಂದ ಕೆಳಗೆ ಬಿದ್ದಿದ್ದಾನೆ. ಬಿದ್ದ ರಭಸಕ್ಕೆ ತಲೆಯು ನೆಲಕ್ಕೆ ಬಡಿದ ಪರಿಣಾಮ ತಲೆಗೆ ಗಂಭೀರ ಗಾಯವಾಗಿತ್ತು. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ಕರೆ ತರುವಷ್ಟರಲ್ಲೇ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

ಈ ಬಗ್ಗೆ ಸಿದ್ದಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ಮೃತರು ಪತ್ನಿ, ಈರ್ವರು ಪುತ್ರಿಯರು ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.