*ಸಿದ್ದಾಪುರ ನ.೨೨ : ನೆಲ್ಯಹುದಿಕೇರಿಯ ಶ್ರೀ ಮುತ್ತಪ್ಪ ದೇವಾಲಯದಲ್ಲಿ ಹುತ್ತರಿ ಹಬ್ಬವನ್ನು ಸಂಭ್ರಮದಿAದ ಆಚರಿಸಲಾಯಿತು.

ವೆಳ್ಳಾಟಂ ನಂತರ ದೇವಾಲಯದ ಗದ್ದೆಯಲ್ಲಿ ಕದಿರು ಕೊಯ್ಯುವ ಮೂಲಕ ವಿಶೇಷ ಪೂಜೆ ಸಲ್ಲಿಸಲಾಯಿತು. ಧಾನ್ಯಲಕ್ಷಿö್ಮಯನ್ನು ಭಕ್ತಿಯಿಂದ ಬರಮಾಡಿಕೊಂಡ ಪ್ರಮುಖರು ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು. ಭಕ್ತರು ಮನೆ ಮನೆಗಳಿಗೆ ಕದಿರನ್ನು ಕೊಂಡೊಯ್ದರು.

ದೇವಾಲಯ ಆಡಳಿತ ಮಂಡಳಿಯ ಅಧ್ಯಕ್ಷ ಪಾಲಚಂಡ ಚೀಯಣ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್ ನೇತೃತ್ವದಲ್ಲಿ ಹಬ್ಬವನ್ನು ಆಚರಿಸಲಾಯಿತು.