ಮಡಿಕೇರಿ, ನ. ೨೨: ಮಡಿಕೇರಿ ನಗರದ ಕಾನ್ವೆಂಟ್ ಶಾಲೆಗೆ ತೆರಳುವ ರಸ್ತೆ ಕಿರಿದಾಗಿದ್ದು ಶಾಲೆಗೆ ತೆರಳುವ ಮಕ್ಕಳಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ವಾರ್ಡ್ ನಂ. ೧೭ ಸದಸ್ಯ ಅರುಣ್ ಶೆಟ್ಟಿ ಅವರು ತಮ್ಮ ಸ್ವಂತ ಖರ್ಚಿನಲ್ಲಿ ಜೆ.ಸಿ.ಬಿ. ಯಂತ್ರದ ಮೂಲಕ ರಸ್ತೆ ಅಗಲೀಕರಣ ಮಾಡಿಸಿದರು.