ಕೂಡಿಗೆ, ನ. ೨೩: ಇಲ್ಲಿಗೆ ಸಮೀಪದ ಶಿರಂಗಾಲ ಗ್ರಾಮ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪದವಿ ಪೂರ್ವ ಕಾಲೇಜುಗಳ ಕುಶಾಲನಗರ ಮತ್ತು ಸೋಮವಾರಪೇಟೆ ತಾಲೂಕು ಮಟ್ಟದ ಖೋಖೋ ಮತ್ತು ಥ್ರೋಬಾಲ್ ಪಂದ್ಯಾವಳಿ ನಡೆಯಿತು.
ಪಂದ್ಯಾಟವನ್ನು ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಚಿ ಎನ್.ಎಸ್. ಶ್ರೀಧರ್ ಉದ್ಘಾಟಿಸಿ ನಂತರ ಮಾತನಾಡಿ, ಕ್ರೀಡಾಪಟುಗಳು ಸ್ಪರ್ಧಾ ಸ್ಪೂರ್ತಿಯಿಂದ ಆಟವಾಡಿ ಗೆಲುವು ಮತ್ತು ಸೋಲನ್ನು ಸಮಚಿತ್ತ ದಿಂದ ಸ್ವೀಕರಿಸಬೇಕೆಂದು ಹೇಳಿದರು.
ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸೋಮಯ್ಯ ಮಾತನಾಡಿ, ಕ್ರೀಡಾಪಟುಗಳು ಅತ್ಯುತ್ತಮವಾದ ಆಟವನ್ನು ಪ್ರದರ್ಶಿಸುವುದರ ಮೂಲಕ ತಮ್ಮ ಕಾಲೇಜಿಗೆ ಕೀರ್ತಿ ತರಬೇಕೆಂದು ತಿಳಿಸಿದರು. ಸಭೆಯಲ್ಲಿ ಕಾಲೇಜಿನ ಹಿರಿಯ ಉಪನ್ಯಾಸಕರಾದ ಭವಾನಿ ಕೆ.ಕೆ., ಹೆಚ್.ಆರ್. ಶಿವಕುಮಾರ್, ದೈಹಿಕ ಶಿಕ್ಷಕಿ ಸೌಮ್ಯ ಮೊದಲಾದವರು ಇದ್ದರು. ಸಮಾರಂಭದ ಅಧ್ಯಕ್ಷತೆಯನ್ನು ಪ್ರಬಾರ ಪ್ರಾಂಶುಪಾಲ ಹಂಡ್ರAಗಿ ನಾಗರಾಜ್ ವಹಿಸಿದ್ದರು.