ಮಡಿಕೇರಿ, ನ. ೨೪: ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಇವರ ಸಹಯೋಗದಲ್ಲಿ ಸ್ವಾತಂತ್ರö್ಯ ಅಮೃತ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಚಾರ ಸಂಕಿರಣ ಮತ್ತು ಮಂಥನ ಕಾರ್ಯಕ್ರಮವು ತಾ. ೨೬ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಲಿದೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷರು ಹಾಗೂ ಹಿರಿಯ ಪತ್ರಕರ್ತ ಮನೆಯಪಂಡ ಪೊನ್ನಪ್ಪ ಅವರು ಉದ್ಘಾಟಿಸಿ ಕ್ರೀಡಾಲೋಕದಲ್ಲಿ ಕನ್ನಡ ಭಾಷೆಯ ಸೊಗಡು ಹಾಗೂ ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಬಗ್ಗೆ ಮಾತನಾಡಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಇತಿಹಾಸ ವಿಭಾಗದ ಪ್ರಾಧ್ಯಾಪಕ ಕೋಡಿರ ಲೋಕೇಶ್ ಮೊಣ್ಣಪ್ಪ ಇತರರು ಪಾಲ್ಗೊಳ್ಳಲಿದ್ದಾರೆ. ಮೈಸೂರು ಮಾನಸಗಂಗೋತ್ರಿ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನಾ ಹಾಗೂ ವಿಸ್ತರಣಾ ಕೇಂದ್ರದ ಪೋಸ್ಟ್ ಡಾಕ್ಟೋರಲ್ ಫೆಲೋ ಡಾ. ಪದ್ಮಾಶ್ರೀ ಟಿ. ಸ್ವಾತಂತ್ರö್ಯ ಹೋರಾಟದಲ್ಲಿ ಮಹಿಳೆಯರ ಪಾತ್ರ ಕುರಿತು ವಿಚಾರ ಮಂಡನೆ ಹಾಗೂ ಹಾಸನ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ಅಧ್ಯಕ್ಷರು ಮತ್ತು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನಕಾರರು ಹಾಗೂ ಸಾಹಿತಿ ಮಾಳೇಟಿರ ಸೀತಮ್ಮ ವಿವೇಕ್ ಅವರು ವಿಚಾರ ಮಂಡನೆ ಮಾಡಲಿದ್ದಾರೆ.