ಮಡಿಕೇರಿ, ನ.೨೪ : ಅಕಾಲಿಕ ಮಳೆಯಿಂದ ರಾಜ್ಯ ತತ್ತರಿಸಿ ಹೋಗಿದೆ, ಜನ ಸಂಕಷ್ಟದಲ್ಲಿದ್ದಾರೆ. ಜನರ ನೋವಿಗೆ ಸ್ಪಂದಿಸಬೇಕಾದ ಸಚಿವರುಗಳು ಚುನಾವಣೆಯನ್ನು ಮುಂದಿಟ್ಟುಕೊAಡು ರಾಜಕೀಯ ಜಾತ್ರೆ ಮಾಡಲು ಕೊಡಗಿಗೆ ಬಂದಿದ್ದರು ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಕೊಡಗು ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಪರ ಮಡಿಕೇರಿಯ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಬೆಂಬಲಿತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅತಿಯಾದ ಮಳೆಯಿಂದ ಸಂಕಷ್ಟ ಎದುರಿಸುತ್ತಿರುವ ಜನರ ಬಳಿಗೆ ಹೋಗಬೇಕಾದ ಸಚಿವರುಗಳು ಮಡಿಕೇರಿ, ನ.೨೪ : ಅಕಾಲಿಕ ಮಳೆಯಿಂದ ರಾಜ್ಯ ತತ್ತರಿಸಿ ಹೋಗಿದೆ, ಜನ ಸಂಕಷ್ಟದಲ್ಲಿದ್ದಾರೆ. ಜನರ ನೋವಿಗೆ ಸ್ಪಂದಿಸಬೇಕಾದ ಸಚಿವರುಗಳು ಚುನಾವಣೆಯನ್ನು ಮುಂದಿಟ್ಟುಕೊAಡು ರಾಜಕೀಯ ಜಾತ್ರೆ ಮಾಡಲು ಕೊಡಗಿಗೆ ಬಂದಿದ್ದರು ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಯ ಕೊಡಗು ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿ ಮಂಥರ್ ಗೌಡ ಪರ ಮಡಿಕೇರಿಯ ಡಾ.ಅಂಬೇಡ್ಕರ್ ಭವನದಲ್ಲಿ ನಡೆದ ಬೆಂಬಲಿತರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಅತಿಯಾದ ಮಳೆಯಿಂದ ಸಂಕಷ್ಟ ಎದುರಿಸುತ್ತಿರುವ ಜನರ ಬಳಿಗೆ ಹೋಗಬೇಕಾದ ಸಚಿವರುಗಳು ಸ್ಪರ್ಧಿಸುವ ನಿರೀಕ್ಷೆಗಳೇ ಇರಲಿಲ್ಲ, ಆದರೆ ಕಾಂಗ್ರೆಸ್ ದೊಡ್ಡ ಅವಕಾಶವನ್ನು ನೀಡಿದೆ. ನಾನು ಕೊಡಗಿಗೆ ನಾಯಕನಾಗಲು ಬಂದಿಲ್ಲ, ಬದಲಿಗೆ ಕಾರ್ಯಕರ್ತನಂತೆ ದುಡಿಯಲು ಬಂದಿದ್ದೇನೆ ಎಂದರು.
ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಪಿ.ರಮೇಶ್ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿಯನ್ನು ಹೊರಗಿನವರು ಎಂದು ಬಿಜೆಪಿ ಟೀಕಿಸುತ್ತಿದೆ. ಈ ಹಿಂದೆ ವೀರಾಜಪೇಟೆ ಶಾಸಕರಾಗಿದ್ದ ಹೆಚ್.ಡಿ.ಬಸವರಾಜು, ಕರ್ನಾಟಕ ದಿಂದ ರಾಜ್ಯಸಭೆ ಪ್ರವೇಶಿಸಿದ್ದ ನಿರ್ಮಲಾ ಸೀತಾರಾಂ, ವೆಂಕಯ್ಯ ನಾಯ್ಡು ಅವರುಗಳು ಎಲ್ಲಿಯವರು ಎಂದು ಪ್ರಶ್ನಿಸಿದರು.
ಕೆಪಿಸಿಸಿ ಪ್ರಮುಖರು ಹಾಗೂ ಜಿ.ಪಂ ಮಾಜಿ ಅಧ್ಯಕ್ಷರಾದ ಕೆ.ಪಿ.ಚಂದ್ರಕಲಾ ಮಾತನಾಡಿ ಪ್ರಾಮಾಣಿಕ ಕಾರ್ಯಕರ್ತರನ್ನು ಗುರುತಿಸದೆ ಒಂದೇ ಕುಟುಂಬದ ಮೂವರಿಗೆ ಅಧಿಕಾರ ಅನುಭವಿಸಲು ಬಿಜೆಪಿ ಅವಕಾಶ ಕಲ್ಪಿಸಿದೆ ಎಂದು ಲೇವಡಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಸಚಿವ ಎಂ.ಸಿ.ನಾಣಯ್ಯ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಸ್.ಅರುಣ್ ಮಾಚಯ್ಯ, ಪ್ರಮುಖರಾದ ಹೆಚ್.ಎಸ್.ಚಂದ್ರಮೌಳಿ, ಪಿ.ಸಿ. ಹಸೈನಾರ್, ವೆಂಕಪ್ಪಗೌಡ, ವಿ.ಕೆ.ಲೋಕೇಶ್, ಮಾಜಿ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಪ್ರಮುಖ ಮುನೀರ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿ, ಸಾಮಾಜಿಕ ಜಾಲತಾಣದ ಜಿಲ್ಲಾಧ್ಯಕ್ಷ ಹೊಸೂರು ಸೂರಜ್ ವಂದಿಸಿದರು. ಸಭೆಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಪುಸ್ತಕ ಬಿಡುಗಡೆಯ ಮೂಲಕ ಚಾಲನೆ ನೀಡಲಾಯಿತು. ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.