ಮಡಿಕೇರಿ, ನ. ೨೪: ಕಂದಾಯ ಇಲಾಖೆಗೆ ಸಂಬAಧಿಸಿದ ವ್ಯಾಜ್ಯದಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ನಿವೃತ್ತ ಜಿಲ್ಲಾ ನ್ಯಾಯಾಧೀಶರು, ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು ಅಥವಾ ಕಾನೂನು ಪದವೀಧರರಾಗಿರುವ (ಎಲ್.ಎಲ್.ಬಿ) ಕಂದಾಯ ಇಲಾಖೆಯ ನಿವೃತ್ತ ವಿಶೇಷ ಜಿಲ್ಲಾಧಿಕಾರಿ/ ನಿವೃತ್ತ ತಹಶೀಲ್ದಾರ್/ ನಿವೃತ್ತ ಉಪ ತಹಶೀಲ್ದಾರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ ಅರ್ಜಿ ಆಹ್ವಾನಿಸಲಾಗಿದೆ.

ಈ ಹುದ್ದೆಗೆ ಸರ್ಕಾರದ ನಿಯಮಾವಳಿಗಳಂತೆ ಸಂಚಿತ ವೇತನ ಪಾವತಿಸಲಾಗುವುದು. ಆಸಕ್ತಿಯುಳ್ಳವರು ತಮ್ಮ ಸ್ವವಿವರಗಳನ್ನೊಳಗೊಂಡ ಪೂರ್ಣ ಮಾಹಿತಿಯೊಂದಿಗೆ ಜಿಲ್ಲಾಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಡಿಸೆಂಬರ್ ೨೨ ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳಿಗೆ ಕಾರ್ಯಾಲಯವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ತಿಳಿಸಿದ್ದಾರೆ.