ಮಡಿಕೇರಿ, ನ. ೨೪: ನೆಹರು ಯುವ ಕೇಂದ್ರ, ಕೊಡಗು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಯುವ ಒಕ್ಕೂಟ ಹಾಗೂ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಇವರ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಗಣರಾಜ್ಯೋತ್ಸವ-೨೦೨೨ರ ಅಂಗವಾಗಿ, “ದೇಶಭಕ್ತಿ ಮತ್ತು ರಾಷ್ಟç ನಿರ್ಮಾಣದಲಿ ್ಲಯುವ ಜನರು” ಶೀರ್ಷಿಕೆಯಲ್ಲಿ “ಸಬ್‌ಕಾ ಸಾತ್, ಸಬ್‌ಕಾ ವಿಕಾಸ್, ಸಬ್‌ಕಾ ವಿಶ್ವಾಸ್ ಸಬ್‌ಕಾ ಪ್ರಯಾಸ್’ ಕುರಿತ ಜಿಲ್ಲಾ ಮಟ್ಟದ ಭಾಷಣ ಸ್ವರ್ಧೆ ಮತ್ತು ಸಂವಿಧಾನ ದಿನಾಚರಣೆಯು ತಾ. ೨೬ ರಂದು ಮಧ್ಯಾಹ್ನ ೧೨.೩೦ ಗಂಟೆಗೆ ನಡೆಯಲಿದೆ.
ಈಗಾಗಲೇ ತಾಲೂಕು ಮಟ್ಟದಲ್ಲಿ ಕಾರ್ಯಕ್ರಮ ನಡೆಸಿ ಪ್ರಥಮ, ದ್ವಿತೀಯ, ತೃತೀಯ ವಿಜೇತಾರದವರು, ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ. ಸುಕುಮಾರ್ ಮತ್ತು ಕಾರ್ಯದರ್ಶಿ ಗಣೇಶ್ ಅವರು ತಿಳಿಸಿದ್ದಾರೆ.