ಸಿದ್ದಾಪುರ, ನ. ೨೪: ಇತ್ತೀಚೆಗೆ ಸುರಿಯುತ್ತಿರುವ ಅಕಾಲಿಕ ಮಳೆಗೆ ಸಿಲುಕಿ ಬೆಳೆ ಹಾನಿಯಾಗಿರುವ ಗ್ರಾಮಗಳಿಗೆ ಕಂದಾಯ ಹಾಗೂ ಕಾಫಿ ಮಂಡಳಿ, ಕೃಷಿ ಇಲಾಖೆಯ ವತಿಯಿಂದ ಸಿದ್ದಾಪುರ ಹಾಗೂ ಮಾಲ್ದಾರೆ ಭಾಗದಲ್ಲಿ ಸಮೀಕ್ಷೆ ನಡೆಸಲಾಯಿತು.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕಾಫಿ ಫಸಲು ಹಾನಿಯಾಗುತ್ತಿರುವುದರಿಂದ ಸರ್ಕಾರದ ಆದೇಶದ ಮೇರೆಗೆ ಸಮೀಕ್ಷೆ ಪ್ರಾರಂಭವಾಗಿದೆ. ಸಿದ್ದಾಪುರದ ಕರಡಿಗೋಡು ಗ್ರಾಮಕ್ಕೆ ಕಾಫಿ ಮಂಡಳಿ, ಕೃಷಿ ಹಾಗೂ ಕಂದಾಯ ಇಲಾಖಾಧಿಕಾರಿಗಳು ಕಾಫಿ ತೋಟಗಳಿಗೆ ತೆರಳಿ ಸಮೀಕ್ಷೆ ನಡೆಸಿ ಬೆಳೆಗಾರರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕಾಫಿ ಮಂಡಳಿ ಅಧಿಕಾರಿ ಖದೀಜ, ಕೃಷಿ ಇಲಾಖೆ ಅಧಿಕಾರಿ ರಾಮಚಂದ್ರ, ಅಮ್ಮತ್ತಿ ಹೋಬಳಿ ಕಂದಾಯ ಪರಿವೀಕ್ಷಕಿ ಭಾನುಪ್ರಿಯ, ಗ್ರಾಮ ಲೆಕ್ಕಿಗ ಓಮಪ್ಪ ಬಣಾಕರ್, ಹಾಗೂ ಇನ್ನಿತರ ಸಿಬ್ಬಂದಿಗಳು ಹಾಜರಿದ್ದರು.