ಸೋಮವಾರಪೇಟೆ, ನ. ೨೫: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶೇಷಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.

ಇಲ್ಲಿನ ಯೋಜನಾ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಯೋಜನಾಧಿಕಾರಿ ಹೆಚ್. ರೋಹಿತ್ ಅವರು, ವಿಶೇಷಚೇತನರಿಗೆ ನೆರವಾಗುವ ಉದ್ದೇಶದಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರ ಆಶಯದಂತೆ ಯೋಜನೆಯ ಮೂಲಕ ಅಗತ್ಯ ಸಾಧನಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ ಎಂದರು. ಈ ಸಂದರ್ಭ ಜಿಲ್ಲಾ ಜನಜಾಗೃತಿ ಸಮಿತಿ ಸ್ಥಾಪಕಾಧ್ಯಕ್ಷ ಅಭಿಮನ್ಯುಕುಮಾರ್, ಪಟ್ಟಣ ಪಂಚಾಯಿತಿ ಅಧ್ಯಕ್ಷ ಪಿ.ಕೆ. ಚಂದ್ರು, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಮಹೇಶ್, ಯೋಜನೆಯ ಹಿರಿಯ ಹಣಕಾಸು ಪ್ರಬಂಧಕಿ ಗೀತಾ ಅವರುಗಳು ಉಪಸ್ಥಿತರಿದ್ದರು.