ಸೋಮವಾರಪೇಟೆ,ನ.೨೫: ಕನ್ನಡ ಕಾಯಕ ವರ್ಷಾಚರಣೆ ಅಂಗವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜಿಲ್ಲಾ ಕನ್ನಡ ಜಾಗೃತಿ ಸಮಿತಿ, ವಿಶ್ವ ಮಾನವ ಕುವೆಂಪು ವಿದ್ಯಾಸಂಸ್ಥೆ, ಪುಷ್ಪಗಿರಿ ಜೇಸೀ ಸಂಸ್ಥೆಯ ಆಶ್ರಯದಲ್ಲಿ ತಾ. ೨೬ರಂದು (ಇಂದು) ಬೆಳಿಗ್ಗೆ ೧೦.೩೦ ಗಂಟೆಗೆ ಸ್ಥಳೀಯ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ ನಡೆಯಲಿದೆ. ಕನ್ನಡ ಭಾಷೆ, ಸಾಹಿತ್ಯ, ನೆಲ-ಜಲ, ಸಂಸ್ಕೃತಿಗೆ ಸಂಬAಧಿಸಿದAತೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕಿನ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.