ಮಡಿಕೇರಿ, ನ. ೨೬ : ೨೦೨೦-೨೧ ನೇ ಸಾಲಿನ ಸಾಮಾನ್ಯ ವರ್ಗಾವಣೆಗಳಲ್ಲಿನ ೨೦೨೦ರ ನವೆಂಬರ್ ೧೧ ರ ವರ್ಗಾವಣಾ ಅರ್ಜಿಗಳ ಪ್ರಾಥಮಿಕ ಶಾಲಾ ಶಿಕ್ಷಕರ ಜಿಲ್ಲೆಯ ಒಳಗಿನ ಕೋರಿಕೆ ವರ್ಗಾವಣೆ (ಮೊದಲ ಹಂತದ) ಕೌನ್ಸಿಲಿಂಗ್ನ್ನು ತಾ. ೨೯ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಉಪ ನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಹಮ್ಮಿಕೊಂಡಿದ್ದು, ಅರ್ಹ ಶಿಕ್ಷಕರು ಕೌನ್ಸಿಲಿಂಗ್ಗೆ ಹಾಜರಾಗಲು ತಿಳಿಸಿದೆ.
ಅರ್ಹ ಶಿಕ್ಷಕರ ಪಟ್ಟಿ ಹಾಗೂ ಕೌನ್ಸಿಲಿಂಗ್ ವೇಳಾ ಪಟ್ಟಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಉಪ ನಿರ್ದೇಶಕರ ಕಚೇರಿಯಲ್ಲಿ ಪ್ರಕಟಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರ ಕಚೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಕೊಡಗು ಜಿಲ್ಲೆ ಇವರ ದೂ.ಸಂ.೦೮೨೭೨-೨೨೮೩೩೭ ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೇದಮೂರ್ತಿ ತಿಳಿಸಿದ್ದಾರೆ.