ನಾಪೋಕ್ಲು, ನ. ೨೫: ಅನಧಿಕೃತವಾಗಿ ಮರಳು ಸಾಗಾಟ ನಡೆಸುತ್ತಿದ್ದ ಟಿಪ್ಪರ್ ವಾಹನವನ್ನು ವಶಪಡಿಸಿಕೊಳ್ಳುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿದ್ದಾರೆ.

ಮಡಿಕೇರಿ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ ಅವರ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಠಾಣಾಧಿಕಾರಿ ಆರ್.ಕಿರಣ್, ಸಿಬ್ಬಂದಿಗಳಾದ ನವೀನ್, ಶರತ್ ಮತ್ತು ಶರೀಪ್ ಟಿಪ್ಪರನ್ನು ವಶಪಡಿಸಿಕೊಂಡು ಮುಂದಿನ ಕಾನೂನು ಕ್ರಮಕೈಗೊಂಡಿದ್ದಾರೆ.