ಮಡಿಕೇರಿ, ನ.೨೬ : ಹದಗೆಟ್ಟಿರುವ ಮೂರ್ನಾಡು- ನಾಪೋಕ್ಲು ರಸ್ತೆ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರುವ ಹೊದ್ದೂರು ಗ್ರಾ.ಪಂ ಪ್ರತಿನಿಧಿಗಳು ಡಿ.೧೦ ರಂದು ವಿಧಾನ ಪರಿಷತ್ ಚುನಾವಣೆ ದಿನವೇ ರಸ್ತೆ ತಡೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.
ಕಳೆದ ೩ ವರ್ಷಗಳಿಂದ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮೂರ್ನಾಡು ಕಾಲೇಜಿನಿಂದ ಹೊದ್ದೂರು ಶಾಲೆಯವರೆಗೆ ವಾಹನಗಳ ಸಂಚಾರ ಅಸಾಧ್ಯವಾಗಿದೆ. ಜಿಲ್ಲಾಡಳಿತ ಹಾಗೂ ಸಂಬAಧಿಸಿದ ಅಧಿಕಾರಿಗಳಿಗೆ ಮನವಿ ಸಲ್ಲಿಸಿ ರಸ್ತೆ ಅವ್ಯವಸ್ಥೆಯ ಚಿತ್ರಣವನ್ನು ವಿವರಿಸಿ ವರ್ಷ ಸಮೀಪಿಸಿದರೂ ಯಾವುದೇ ಸ್ಪಂದನೆ ದೊರೆತ್ತಿಲ್ಲವೆಂದು ಹೊದ್ದೂರು ಗ್ರಾ.ಪಂ ಸದಸ್ಯ ಕೆ.ಮೊಣ್ಣಪ್ಪ ಆರೋಪಿಸಿದ್ದಾರೆ.
ಡಿ.೧೦ ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಚಲಾಯಿಸದೆ ಬಹಿಷ್ಕರಿಸಲು ಪಂಚಾಯ್ತಿ ಪ್ರತಿನಿಧಿಗಳು ನಿರ್ಧಾರ ಕೈಗೊಂಡಿದ್ದೇವೆ. ಚುನಾವಣೆ ದಿನವೇ ರಸ್ತೆ ತಡೆದು ಪ್ರತಿಭಟನೆ ನಡೆಸಿ ಆಡಳಿತ ವ್ಯವಸ್ಥೆಯ ಗಮನ ಸೆಳೆಯುವುದಾಗಿ ಅವರು ಹೇಳಿದ್ದಾರೆ.