ಮಡಿಕೇರಿ, ನ. ೨೬: ರೈತರ ಬೆಳೆಗೆ ಬೆಂಬಲ ಬೆಲೆ ಕಾಯ್ದೆಗಾಗಿ ಆಗ್ರಹಿಸಿ, ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕೆAದು ಒತ್ತಾಯಿಸಿ ಕೊಡಗು ರೈತ ಪರ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ವಾಹನ ಜಾಥಾ ಹಾಗೂ ಮಾನವ ಸರಪಳಿ ನಡೆಯಿತು.
ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಬೈಕ್ ಹಾಗೂ ಟ್ರಾö್ಯಕ್ಟರ್ ಸೇರಿದಂತೆ ವಾಹನಗಳಲ್ಲಿ ಜಾಥಾ ಆರಂಭಿಸಿದ ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ಜಿ.ಟಿ. ವೃತ್ತಕ್ಕೆ ಬಂದು ಮಾನವ ಸರಪಳಿ ನಿರ್ಮಿಸಿದರು. ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದೆ. ಇದರೊಂದಿಗೆ ರೈತರ ಬೆಳೆಗೆ ಬೆಂಬಲ ಬೆಲೆ ಕಾಯ್ದೆ ಜಾರಿಗೊಳಿಸಬೇಕು, ವಿದ್ಯುತ್ ಖಾಸಗೀಕರಣವನ್ನು ಹಿಂಪಡೆಯಬೇಕು. ದೆಹಲಿಯಲ್ಲಿ ನಡೆದ ರೈತ ಹೋರಾಟದಲ್ಲಿ ಸಾವನ್ನಪ್ಪಿದ ರೈತ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಡಾ. ಬಿ.ಸಿ. ಸತೀಶ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಪ್ರತಿಭಟನೆಯಲ್ಲಿ ಒಕ್ಕೂಟದ ಪ್ರಮುಖರಾದ ಎಸ್ಡಿಪಿಐ ಮಾಜಿ ಜಿಲ್ಲಾಧ್ಯಕ್ಷರುಗಳಾದ ಅಮಿನ್ ಮೊಯ್ಸಿನ್, ಮನ್ಸೂರ್, ನಿರ್ವಾಣಪ್ಪ, ಕೆ.ಬಿ. ರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುರಯ್ಯಾ ಅಬ್ರಾರ್, ನಗರಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ಜಿ.ಪಂ. ಮಾಜಿ ಉಪಾಧ್ಯಕ್ಷೆ ಕಾವೇರಿ ಮತ್ತಿತರರು ಪಾಲ್ಗೊಂಡಿದ್ದರು.