ಮಡಿಕೇರಿ, ನ. ೨೫: ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬAಧ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮತ್ತು ಕೋವಿಡ್-೧೯ ನಿಯಮಗಳನ್ನು ಪಾಲಿಸುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಬಿ.ಸಿ. ಸತೀಶ ಅವರು ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆ ಚುನಾವಣೆ ಸಂಬAಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ನಿಯಮಗಳನ್ನು ಪಾಲಿಸಬೇಕು. ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದAತೆ ಗಮನಹರಿಸಬೇಕು. ಚುನಾವಣೆಗೆ ನಿಯೋಜಿಸಿರುವ ವಿವಿಧ ತಂಡಗಳು ತಮ್ಮ ವ್ಯಾಪ್ತಿಯಲ್ಲಿನ ಕಾರ್ಯವನ್ನು ವ್ಯವಸ್ಥಿತವಾಗಿ ನಿರ್ವಹಿಸುವಂತೆ ತಿಳಿಸಿದರು.

ಚುನಾವಣಾ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಪಾಲನೆ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಪ್ರಚಾರ, ಸಭೆ ಮತ್ತು ಮೆರವಣಿಗೆ ಸಂದರ್ಭದಲ್ಲಿ ಅನುಮತಿ ಪಡೆದಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ವೀಡಿಯೋ ರೆಕಾರ್ಡಿಂಗ್ ತಂಡ ರೆಕಾರ್ಡ್ ಮಾಡಿಕೊಳ್ಳಬೇಕು. ಚುನಾವಣೆ ಸಂಬAಧ ವಿವಿಧ ತಂಡದ ಅಧಿಕಾರಿಗಳು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದರು.

ಅಬಕಾರಿ, ಪೊಲೀಸ್, ಕಂದಾಯ ಹಾಗೂ ವಿವಿಧ ತಂಡಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಚುನಾವಣಾ ನಿಯಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ವಿಧಾನ ಪರಿಷತ್ ಚುನಾವಣೆ ಸಂಬAಧ ಮಾದರಿ ನೀತಿ ಸಂಹಿತೆ ಪಾಲಿಸುವ ಬಗೆ ಮಾಹಿತಿ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಉಪ ವಿಭಾಗಾಧಿಕಾರಿ ಈಶ್ವರ ಕುಮಾರ್ ಖಂಡು, ಪ್ರಾದೇಶಿಕ ಸಾರಿಗೆ ಅಧಿಕಾರಿ ವಿನಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್, ತಹಶೀಲ್ದಾರ್‌ಗಳಾದ ಪಿ.ಎಸ್. ಮಹೇಶ್, ಗೋವಿಂದರಾಜು, ಪೊಲೀಸ್ ಇನ್ಸ್ಪೆಕ್ಟರ್ ಮೇದಪ್ಪ, ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕಿ ಕೆ.ಟಿ. ದರ್ಶನ, ಅಬಕಾರಿ ಇಲಾಖೆ ಅಧಿಕಾರಿ ಜಗದೀಶ್ ನಾಯಕ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಶ್ರೀನಿವಾಸ್, ಪೌರಾಯುಕ್ತ ರಾಮದಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ನಾಚಪ್ಪ, ನಗರಾಭಿವೃದ್ಧಿ ಯೋಜನಾ ಶಾಖೆಯ ಎಇಇ ನಟರಾಜು, ನಗರಸಭೆ ಎಇಇ ರಾಜೇಂದ್ರ ಕುಮಾರ್, ವೀರಾಜಪೇಟೆ ಪ.ಪಂ. ಎಇಇ ಹೇಮಕುಮಾರ್, ಗ್ರಾ.ಪಂ. ಇಒಗಳಾದ ಶೇಖರ್, ಜಯಣ್ಣ ಇತರರು ಇದ್ದರು.