ಮಡಿಕೇರಿ, ನ. ೨೬: ಕೊಡಗು ಜಿಲ್ಲೆ ಕ್ರೀಡಾ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ಇಂತಹ ಜಿಲ್ಲೆಯಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನಗಳು ನಡೆಯಬೇಕು ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ, ಹಿರಿಯ ಪತ್ರಕರ್ತ ಮನೆಯಪಂಡ ಪೊನ್ನಪ್ಪ ಇಂಗಿತ ವ್ಯಕ್ತಪಡಿಸಿದರು.

ಅಲ್ಲಾರಂಡ ರಂಗಚಾವಡಿ ಹಾಗೂ ಸಿರಿಗನ್ನಡ ವೇದಿಕೆ ಕೊಡಗು ವತಿಯಿಂದ ಸ್ವಾತಂತ್ರö್ಯ ಅಮೃತ ಮಹೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ನಗರದ ಕೊಡವ ಸಮಾಜ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಚಾರ ಸಂಕಿರಣ ಮತ್ತು ಮಂಥನ ಕಾರ್ಯಕ್ರಮದಲ್ಲಿ ಕ್ರೀಡಾಲೋಕದಲ್ಲಿ ಕನ್ನಡ ಭಾಷೆಯ ಸೊಗಡು ಹಾಗೂ ಕೊಡಗಿನಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ವಿಷಯದ ಕುರಿತು ಅವರು ಮಾತನಾಡಿದರು. ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆಯಾಗುವುದೇ ಆದರೆ, ಅದು ಕೊಡಗಿನಲ್ಲೇ ಆಗಬೇಕು. ಇದು ಪ್ರತಿಯೊಬ್ಬರ ಧ್ಯೇಯ ಹಾಗೂ ಹಕ್ಕೋತ್ತಾಯವಾಗಬೇಕು. ಕ್ರೀಡಾ ವಿ.ವಿ. ಸ್ಥಾಪನೆಯಾದಲ್ಲಿ ಕ್ರೀಡಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಸಾಧ್ಯ. ಸಾವಿರಾರು ಪ್ರತಿಭೆಗಳು ಹೊರಹೊಮ್ಮಲು ಅವಕಾಶ ಸಿಕ್ಕಂತಾಗುತ್ತದೆ ಎಂದು ಪೊನ್ನಪ್ಪ ಹೇಳಿದರು. ಸ್ವಾತಂತ್ರö್ಯ ಹೋರಾಟದಲ್ಲಿ ಮಹಿಳೆಯರ ಪಾತ್ರದ ಕುರಿತು ಮೈಸೂರು ಮಾನಸ ಗಂಗೋತ್ರಿಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ಪೋಸ್ಟ್ ಡಾಕ್ಟರಲ್ ಫೆಲೋ ಡಾ.ಟಿ. ಪದ್ಮಾಶ್ರೀ ಮಾತನಾಡಿ, ಸ್ವಾತಂತ್ರö್ಯ ಹೋರಾಟದಲ್ಲಿ ಕೊಡಗಿನಲ್ಲಿ ಕೋಳೆರ ಕಾವೇರಿ, ಕೋಟೇರ ಅಕ್ಕಮ್ಮ ಸೇರಿದಂತೆ ಹಲವಾರು ಮಹಿಳೆಯರು ಪ್ರಮುಖ ಪಾತ್ರ ವಹಿಸಿದ್ದರಾದರೂ, ಅದು ಇತಿಹಾಸದ ಪುಟಗಳಲ್ಲಿ ದಾಖಲಾಗಲಿಲ್ಲ ಎಂಬುದು ಖೇದಕರ ಸಂಗತಿ ಎಂದು ಹೇಳಿದರು. ಪಂಚ ದ್ರಾವಿಡ ಭಾಷೆಗಳಲ್ಲಿ ಕೊಡವ ಭಾಷೆಯ ಅಸ್ತಿತ್ವದ ಕುರಿತು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನಕಾರರಾದ

(ಮೊದಲ ಪುಟದಿಂದ) ಮಾಳೇಟಿರ ಸೀತಮ್ಮ ವಿವೇಕ್ ಮಾತನಾಡಿದರು. ಕೊಡಗಿನ ಗಾಂಧಿ ಖ್ಯಾತಿಯ ಪಂದ್ಯAಡ ಬೆಳ್ಯಪ್ಪ ದಂಪತಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗಣ್ಯರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಪ್ರಾಸ್ತಾವಿಕ ನುಡಿಯಾಡಿದರು. ಮಂಗಳ ಗಂಗೋತ್ರಿ ಮಂಗಳೂರು ವಿವಿಯ ಮಾಜಿ ಕುಲ ಸಚಿವರು, ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಕೋಡೀರ ಲೋಕೇಶ್ ಮೊಣ್ಣಪ್ಪ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭ ರಂಗಭೂಮಿ ಕಲಾವಿದರಾದ ಶ್ರೀನಿವಾಸ ನಾಯ್ಡು, ರಾಧಾ ಇವರುಗಳನ್ನು ಸನ್ಮಾನಿಸಲಾಯಿತು. ಹೇಮಲತಾ ತಂಡ ಪ್ರಾರ್ಥಿಸಿ, ಪಂದ್ಯAಡ ರೇಣುಕಾ ಸ್ವಾಗತಿಸಿದರು. ಕಿಶೋರ್ ರೈ ಕತ್ತಲೆಕಾಡು, ರಂಜಿತ್ ಕವಲಪಾರ ನಿರೂಪಿಸಿದರು.