*ಗೋಣಿಕೊಪ್ಪ, ನ. ೨೬: ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ತರಗತಿಗೆ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ವನಜಾಕ್ಷಿ ಭೇಟಿ ನೀಡಿದರು.
ಮಕ್ಕಳ ಆರೋಗ್ಯ, ಶಿಕ್ಷಣ ಮತ್ತು ಆಹಾರದ ಗುಣಮಟ್ಟವನ್ನು ಪರೀಕ್ಷಿಸಿ ಮಕ್ಕಳೊಂದಿಗೆ ಬೆರೆತು ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರು. ಈ ಸಂದರ್ಭ ಸಮೂಹ ಸಂಪನ್ಮೂಲ ವ್ಯಕ್ತಿ ತಿರುನೆಲ್ಲಿಮಾಡ ಜೀವನ್, ಮುಖ್ಯ ಶಿಕ್ಷಕ ಬಿ.ಎಂ. ವಿಜಯ ಇದ್ದರು.