ಸುಂಟಿಕೊಪ್ಪ, ನ. ೨೬: ಗರಗಂದೂರಿನ ಶ್ರೀಮತಿ ಡಿ.ಚೆನ್ನಮ್ಮ ಜೂನಿಯರ್ ಕಾಲೇಜು ತಂಡವು ಪದವಿಪೂರ್ವ ವಿಭಾಗದಲ್ಲಿ ಫುಟ್ಬಾಲ್ ಕ್ರೀಡಾಕೂಟದಲ್ಲಿ ಜಯಗಳಿಸುವ ಮೂಲಕ ಜಿಲ್ಲಾಮಟ್ಟಕ್ಕೆ ಆರ್ಹತೆ ಪಡೆದುಕೊಂಡಿದೆ. ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಫುಟ್ಬಾಲ್ ಕ್ರೀಡಾಕೂಟದಲ್ಲಿ ಶನಿವಾರಸಂತೆ ಪದವಿ ಪೂರ್ವ ಕಾಲೇಜು ತಂಡದ ವಿರುದ್ಧ ೨-೦ ಗೋಲುಗಳಿಂದ ಮಣ್ಣಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದೆ. ಬಾಲಕಿಯರ ತಂಡಕ್ಕೆ ಯಾವುದೇ ಪದವಿ ಕಾಲೇಜುಗಳ ತಂಡಗಳು ಬಾರದ ಕಾರಣ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.