ಭಾಗಮಂಡಲ, ನ. ೨೬: ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಅಕಾಲಿಕ ಮಳೆ ಹಾಗೂ ಪ್ರಕೃತಿ ವಿಕೋಪದಲ್ಲಿ ಹಾನಿಯಾಗಿರುವ ಬೆಳೆಗಳಿಗೆ ಪರಿಹಾರ ನೀಡುವ ಸಂಬAಧ ಕಂದಾಯ, ಕೃಷಿ, ಕಾಫಿ ಮಂಡಳಿ, ತೋಟಗಾರಿಕೆ ಇಲಾಖೆಗಳಿಂದ ಜಂಟಿ ಸಮೀಕ್ಷೆ ನಡೆಸಲಾಯಿತು.
ಅಕಾಲಿಕ ಹಾಗೂ ನಿರಂತರ ಮಳೆಯಿಂದ ಉಂಟಾಗಿರುವ ಬೆಳೆ ಹಾನಿಗೆ ಸಂಬAಧಿಸಿದAತೆ ಸಮೀಕ್ಷೆ ನಡೆಸಿ ಬೆಳೆ ಹಾನಿ ವರದಿ ನೀಡಲು ಕೃಷಿ ತೋಟಗಾರಿಕಾ ಇಲಾಖೆ ಮಂಡಳಿ ಹಾಗೂ ಕಂದಾಯ ಇಲಾಖೆಗಳ ಸಿಬ್ಬಂದಿಗಳ ತಂಡವನ್ನು ನಿಯೋಜಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು ಭಾಗಮಂಡಲ ವ್ಯಾಪ್ತಿಯ ವಿವಿಧ ವೃತ್ತಗಳಿಗೆ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಭಾಗಮಂಡಲ, ಸಣ್ಣಪುಲಿಕೋಟು, ಅಯ್ಯಂಗೇರಿ, ಕರಿಕೆ, ಕುಂದಚೇರಿ, ಚೇರಂಬಾಣೆ, ಕಾರುಗುಂದ, ಬೆಟ್ಟಗೇರಿ ವೃತ್ತಗಳಿಗೆ ಭೇಟಿ ನೀಡಿ ವಿವಿಧ ಗ್ರಾಮಗಳಲ್ಲಿ ಸಮೀಕ್ಷೆ ನಡೆಸಲಾಯಿತು.
ಬಳಿಕ ರೈತರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಬೆಳೆಹಾನಿ ಉಂಟಾದ ರೈತರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ ಮೊಬೈಲ್ ಸಂಖ್ಯೆಯೊAದಿಗೆ ಭಾಗಮಂಡಲದ ನಾಡಕಚೇರಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ರೈತರು ತಮ್ಮ ಜಮೀನಿನ ಪಹಣಿ ಪತ್ರದ ನಕಲನ್ನು ನೀಡುವ ಅಗತ್ಯವಿಲ್ಲ ಎಂದು ತಿಳಿಸಿದರು. ಕಂದಾಯ ಪರಿವೀಕ್ಷಕ ಸದಾಶಿವ ಶಿವಣ್ಣವರ, ಕಾಫಿ ಮಂಡಳಿ ವಿಸ್ತರಣಾ ವಿಭಾಗದ ಪದ್ಮಭೂಷಣ, ಸಹಾಯಕ ತೋಟಗಾರಿಕೆ ಅಧಿಕಾರಿ ಬಿ.ಡಿ. ವಸಂತ, ಕೃಷಿ ಅಧಿಕಾರಿ ಎಂ.ಕೆ. ಜಯರಾಮ್ ಇದ್ದರು.
-ಸುನಿಲ್