ಶನಿವಾರಸಂತೆ, ನ. ೨೬: ಸಮೀಪÀದ ಕ್ಯಾತೆ ಗ್ರಾಮದ ಅಲ್ಪ ಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಜಿಲ್ಲಾ ಮಕ್ಕಳ ಸಹಾಯವಾಣಿ ಸಹಭಾಗಿತ್ವದಲ್ಲಿ ಮಕ್ಕಳ ಹಕ್ಕುಗಳ ಕಾನೂನು ಅರಿವು ಕಾರ್ಯಕ್ರಮ ಶಾಲೆಯ ಮೌಲಾನಾ ಆಜಾದ್ ಸಭಾಂಗಣದಲ್ಲಿ ನಡೆಯಿತು.
ಸಹಾಯವಾಣಿಯ ಜಿಲ್ಲಾ ಸಂಯೋಜಕ ನವೀನ್ ಮಾತನಾಡಿ, ‘ಚೈಲ್ಡ್ ಲೈನ್ ಸೇ ದೋಸ್ತಿ’ ಎಂಬ ವಿನೂತನ ಯೋಜನೆಯಡಿ ಮಕ್ಕಳ ಹಕ್ಕುಗಳ ಕುರಿತು ಎಲ್ಲಾ ಶಾಲೆಗಳಲ್ಲಿ ಉಪಯುಕ್ತ ಮಾಹಿತಿ ಕಾರ್ಯಾಗಾರ ವನ್ನು ನಡೆಸಲಾಗುತ್ತಿದೆ ಎಂದರು.
ಬ್ಯಾಡಗೊಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹರೀಶ್ ಅವರು, ‘ಬಾಲ್ಯವಿವಾಹ ತಡೆಗಟ್ಟುವಿಕೆ’, ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆ ಸಿಬ್ಬಂದಿ ಪರಮೇಶ್ ‘ಪೋಕ್ಸೊ ಕಾಯಿದೆ’ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿ ಕುಮಾರಿ ‘ಶಿಕ್ಷಣ ಹಕ್ಕು ಕಾಯ್ದೆ’ ಬಗ್ಗೆ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಶಾಲೆಯ ಪ್ರಾಂಶುಪಾಲ ಮಹೇಶ್ ಮಾತನಾಡಿ ಮೊಬೈಲ್ ಫೋನ್ಗಳ ದುರ್ಬಳಕೆ ಹಾಗೂ ಆನ್ಲೈನ್ ತರಗತಿಗಳ ಕುರಿತು ಮಾಹಿತಿ ನೀಡಿದರು.
ಲಾಕ್ಡೌನ್ ಸಂದರ್ಭದ ಆನ್ಲೈನ್ ತರಗತಿಗಳ ಸಾಧಕ-ಬಾಧಕ ವಿಷಯದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಸತಿ ಶಾಲೆಯ ವಿದ್ಯಾರ್ಥಿಗಳಾದ ಎಂ. ಹರ್ಷಿತ್, ಎಂ.ಸಿ. ಸ್ವಾತಿ, ಅಂಕಿತಾರಿಗೆ ಚೈಲ್ಡ್ ಲೈನ್ ದೋಸ್ತಿ ಪತ್ರದ ಜತೆ ಬಹುಮಾನ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೂ ಪ್ರಶಸ್ತಿ ಪತ್ರ ವಿತರಿಸಲಾಯಿತು.
ಕೊಡ್ಲಿಪೇಟೆ ಉಪ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಡಿಂಪಲ್, ಸಹಾಯವಾಣಿ ಸಾಮಾಜಿಕ ಕಾರ್ಯಕರ್ತರಾದ ಪ್ರವೀಣ್, ಯೋಗೀಶ್, ಶಿಕ್ಷಕ ಪ್ರತಾಪ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪಾವನಾ, ಸದಸ್ಯರಾದ ಎಂ. ಹನೀಫ್, ಮೋಕ್ಷಿತ್ರಾಜ್, ಕೊಡ್ಲಿಪೇಟೆ ಗ್ರಾಮ ಪಂಚಾಯಿತಿ ಸದಸ್ಯೆ ಲಾವಣ್ಯ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.