ಮಡಿಕೇರಿ, ನ. ೨೭: ೨೦೨೧ ರ ನವೆಂಬರ್ ತಿಂಗಳನ್ನು ಅಂರ‍್ರಾಷ್ಟಿçÃಯ ದತ್ತು ಮಾಸಾಚರಣೆ ಯಾಗಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾನೂನುಬದ್ಧ ದತ್ತು ಕುರಿತು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸುಬ್ರಮಣ್ಯ ಎನ್. ಉದ್ಘಾಟಿಸಿದರು. ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕರು ಹಾಗೂ ಡೀನ್ ಡಾ. ಕಾರ್ಯಪ್ಪ ಹಾಗೂ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಮಂಜುನಾಥ ಎಸ್., ಜಿಲ್ಲಾ ಶಸ್ತçಚಿಕಿತ್ಸಕ ಡಾ. ವಿಶಾಲ್‌ಕುಮಾರ್ ಹಾಗೂ ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಮಂಜುಳ ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಕಾನೂನುಬದ್ಧ ದತ್ತು ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು. ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು ಹಾಗೂ ವಿಶೇಷ ಮಕ್ಕಳ ಪೊಲೀಸ್ ಘಟಕದ ಸಿಬ್ಬಂದಿಗಳು ಹಾಜರಿದ್ದರು.