ಸೋಮವಾರಪೇಟೆ, ನ. ೨೭: ತುಮಕೂರಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆದ ಮಾತೃಭೂಮಿ ಸೇವಾ ಟ್ರಸ್ಟ್ನ ವಾರ್ಷಿಕೋತ್ಸವದಲ್ಲಿ ಸೋಮವಾರಪೇಟೆ ಪಟ್ಟಣದ ಎಂ.ಎ. ರುಬೀನಾ ಅವರಿಗೆ ‘ಡಾ. ಎಪಿಜೆ ಅಬ್ದುಲ್ ಕಲಾಂ ರಾಷ್ಟç ಪ್ರಶಸ್ತಿ’ ನೀಡಿ ಸನ್ಮಾನಿಸಲಾಯಿತು.
ರುಬೀನಾ ಅವರ ಸಾಹಿತ್ಯ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತೃಭೂಮಿ ಸೇವಾ ಟ್ರಸ್ಟ್ ಅಧ್ಯಕ್ಷರಾದ ಡಾ. ಜ್ಯೋತಿ ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್ ಶಹಪೂರವಾಡ್, ಚಿತ್ರನಟ ಕಿಶೋರ್‌ಕುಮಾರ್, ರೈಲ್ವೇ ಇಲಾಖೆಯ ಆನಂದ್, ಡಾ. ಚಂದನ್ ಸೇರಿದಂತೆ ಇತರರು ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.