ಮಡಿಕೇರಿ, ನ. ೨೭: ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಹಾಗೂ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಸಂಯುಕ್ತಾಶ್ರಯದಲ್ಲಿ ತಾ. ೨೯ ರಂದು ನಗರದ ಕೊಡಗು ಪತ್ರಿಕಾ ಭವನದಲ್ಲಿ ೪ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.
ಅಂದು ಬೆಳಿಗ್ಗೆ ೧೦ ಗಂಟೆಗೆ ಆರಂಭಗೊಳ್ಳುವ ಸಮಾರಂಭವನ್ನು ನಗರದ ಸರಸ್ವತಿ ಶಿಕ್ಷಕರ ತರಬೇತಿ ಕೇಂದ್ರದ ಪ್ರಾಂಶುಪಾಲ ಕುಮಾರ ಉದ್ಘಾಟಿಸಲಿದ್ದಾರೆ. ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಅಧ್ಯಕ್ಷ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಬಿ.ಎನ್.ಮನುಶೆಣೈ ಪಾಲ್ಗೊಳ್ಳಲಿದ್ದಾರೆ.
ಸಮಾರೋಪ ಸಮಾರಂಭ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅವರ ಅಧ್ಯಕ್ಷತೆಯಲ್ಲಿ ಮಧ್ಯಾಹ್ನ ೩.೩೦ ಗಂಟೆಗೆ ನಡೆಯಲಿದೆ. ದತ್ತಿ ಪ್ರಶಸ್ತಿಯನ್ನು ಶನಿವಾರಸಂತೆಯ ಶ್ರೀ ವಿಘ್ನೇಶ್ವರ ಬಾಲಿಕ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕುಮಾರಿ ಸುಚಿತ ಕೆ.ಎಸ್. ಅವರಿಗೆ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷÀ ಟಿ.ಪಿ.ರಮೇಶ್ ಪ್ರದಾನ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಡಿಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ರೇವತಿ ರಮೇಶ್ ಪಾಲ್ಗೊಳ್ಳಲಿದ್ದಾರೆ.