ಬೆಂಗಳೂರು, ನ. ೨೭: ಕೇರಳ ಸೇರಿದಂತೆ ಇತರೆಡೆಗಳಲ್ಲಿ ಕೋವಿಡ್ ಹಾಗೂ ರೂಪಾಂತರಿ ಕೊರೊನಾ ವೈರಸ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನೆಲೆ ಕೋವಿಡ್ ೧೯ ನಿಯಂತ್ರಣಕ್ಕೆ ಸಂಬAಧಿಸಿದAತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಕೆಲವೊಂದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಕೇರಳ ಮತ್ತು ಮಹಾರಾಷ್ಟç ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದ್ದು, ರಾಷ್ಟಿçÃಯ ಹೆದ್ದಾರಿಗಳಲ್ಲಿ ಬಿಗಿ ತಪಾಸಣೆ ಕೈಗೊಳ್ಳುವುದು, ಕೇರಳ ಮತ್ತು ಮಹಾರಾಷ್ಟçದಿಂದ ರಾಜ್ಯ ಪ್ರವೇಶಿಸುವವರಿಗೆ ಆರ್.ಟಿ.ಪಿ.ಸಿ. ಆರ್. ನೆಗೆಟಿವ್ ರಿಪೋರ್ಟ್ ಕಡ್ಡಾಯ, ಗಡಿ ಜಿಲ್ಲೆಗಳಲ್ಲಿ ಮೂರು ಪಾಳಿಗಳಲ್ಲಿ ಕೆಲಸ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ, ಇದಕ್ಕೆ ಎಲ್ಲ ಇಲಾಖೆಗಳ ಸಹಕಾರ ಪಡೆಯಲು ನಿರ್ದೇಶಿಸಿದ್ದಾರೆ.

೧೬ ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡಿಸಬೇಕು ಹಾಸ್ಟೆಲ್‌ಗಳಲ್ಲಿ ವಾಸಿಸುತ್ತಿರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ರಿಪೋರ್ಟ್ ಬಂದ ನಂತರದ ೭ ನೇ ದಿನಕ್ಕೆ ಮತ್ತೊಮ್ಮೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆ ಮಾಡು ವುದು, ಕೇರಳ ಮತ್ತು ಮಹಾ ರಾಷ್ಟçದಿಂದ ರಾಜ್ಯಕ್ಕೆ ಆಗಮಿಸು ವವರನ್ನು

(ಮೊದಲ ಪುಟದಿಂದ) ಕಡ್ಡಾಯವಾಗಿ ಪರೀಕ್ಷೆಗೊಳಪಡಿಸಬೇಕು, ಹೊಟೇಲು, ರೆಸ್ಟೋರೆಂಟ್‌ಗಳು, ಸಿನಿಮಾ ಹಾಲ್‌ಗಳು, ಈಜುಕೊಳ, ಸಾರ್ವಜನಿಕ ಗ್ರಂಥಾಲಯ, ಮೃಗಾಲಯಗಳು ಮತ್ತು ಜೈವಿಕ ಉದ್ಯಾನವನಗಳು, ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಪಡೆದಿರಬೇಕು ಎಂದು ತಿಳಿಸಿದ್ದಾರೆ.

ವೈದ್ಯಕೀಯ ಕಾಲೇಜು ಮತ್ತು ನರ್ಸಿಂಗ್ ಕಾಲೇಜುಗಳ ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸುವುದು, ಸರ್ಕಾರಿ ಕಚೇರಿಗಳಲ್ಲಿ ಹಾಗೂ ಮಾಲ್‌ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆಯಬೇಕು, ಸರ್ಕಾರಿ ಕಚೇರಿ ಹಾಗೂ ಮಾಲ್‌ಗಳಲ್ಲಿಯೇ ಲಸಿಕೆ ನೀಡಲು ವ್ಯವಸ್ಥೆ ಕಲ್ಪಿಸುವುದು, ಅಂತರರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ತಪಾಸಣೆಗಳನ್ನು ತೀವ್ರಗೊಳಿಸುವುದು. ನೆಗೇಟಿವ್ ಇದ್ದವರಿಗೆ ನಗರ ಪ್ರವೇಶಕ್ಕೆ ಅನುಮತಿ, ಪಾಸಿಟಿವ್ ಇದ್ದವರಿಗೆ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸುವಂತೆ ನಿರ್ದೇಶನ ನೀಡಿದ್ದಾರೆ.